ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಚಿವರಾದ ಎಸ್.ಟಿ. ಸೋಮಶೇಖರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದನ್ನ ಖಂಡಿಸಿ ಮೌರ್ಯ ವೃತ್ತ ಗಾಂಧಿ ಪ್ರತಿಮೆ ಬಳಿ ಬೆಂಗಳೂರು ನಗರ ಜಿಲ್ಲಾ ಕೇಂದ್ರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಅಧ್ಯಕ್ಷರಾದ ಸಲ್ಮಾತಾಜ್ ಮಾತನಾಡಿ, ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಅಭ್ಯರ್ಥಿಯಾದ ಕೆ.ಜಿ.ಎಫ್ ಬಾಬುರವರ ಕುಟುಂಬದ ಮಹಿಳೆಯರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೋಳಿ ನಮ್ಮ ಪಕ್ಷದ ಶಾಸಕಿ ಲಕ್ಷ್ಮೀಹೆಬ್ಬಾಕ್ಕರ್ ರವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದು ಬಿಜೆಪಿ ಪಕ್ಷ ಮಹಿಳಾ ವಿರೋಧಿ ನಿಲುವು ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.

ಹಲವಾರು ಬಿಜ.ಪಿ ನಾಯಕರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.
ಮಹಿಳೆ ತಾಯಿ , ತಂಗಿ , ಅಕ್ಕನಾಗಿ ಕುಟುಂಬವನ್ನು ನಿಭಾಯಿಸುತ್ತಾಳೆ .ಮಹಿಳೆಯನ್ನ ಗೌರವದಿಂದ ಕಾಣುವ ಮನೋಭಾವನೆಯನ್ನು ಬಿಜೆಪಿಯವರು ಬೆಳಸಿಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕೇಂದ್ರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸಲ್ಮಾತಾಜ್, ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















