No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ | 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 27, 2024
in ಬೆಂಗಳೂರು ನಗರ
0
16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ | 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ “ಬಿಎಲ್‌ಆರ್‌ ಹಬ್ಬ” ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್‌ಆರ್‌ ಹಬ್ಬ 16 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಸಾರುವ ಹಾಗೂ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಿತು.

ಈ 16 ದಿನಗಳ ಬಿಎಲ್‌ಆರ್‌ ಹಬ್ಬದಲ್ಲಿ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ವಿಶೇಷ. ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯಲ್ಲಿರುವ ಸಭಾ ಮತ್ತು ಎನ್‌ಜಿಎಂಎ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದರಲ್ಲಿ ಹೆಸರಾಂತ ಕಲಾವಿದರ ಸಂಗೀತ ಕಚೇರಿಗಳು, ನಾಟಕ ಪ್ರದರ್ಶನ, ಜಾನಪದ ಕಲೆ ಪ್ರದರ್ಶನ, ಸಾಹಿತ್ಯ ಕಾರ್ಯಕ್ರಮಗಳು, ಕುವೆಂಪು ಅವರ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಗಲ-ಗಲ-ಗದ್ದಲ ಸೇರಿದಂತೆ 500ಕ್ಕೂ ಅಧಿಕ ಕಾರ್ಯಕ್ರಮಗಳು ಈ ಅವಧಿಯಲ್ಲಿ ಯಶಸ್ವಿಯಾಗಿ ನಡೆದಿವೆ. ಅಷ್ಟೆ ಅಲ್ಲದೆ, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ “ಬೆಂಗಳೂರು ಚಾಲೆಂಜ್‌” ಸ್ಪರ್ಧೆಯು ಹೆಚ್ಚು ಆಕರ್ಷಣೀಯವಾಗಿತ್ತು. ಜೊತೆಗೆ, “ಬಿಎಲ್‌ಆರ್‌ ಗೋಡೆ” ಉಪಕ್ರಮದ ಮೂಲಕ ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ ಮೂಡಿಸುವ ಸರಣಿ ನಡೆಯಿತು.  ಹೆಚ್ಚುವರಿಯಾಗಿ, ನಿಮ್ಮ ಉದ್ಯಾನವನದಲ್ಲಿ ಹಬ್ಬ, ರಿಚ್ಮಂಡ್ ರೋಡ್ ಮತ್ತು ಇತರವುಗಳನ್ನು ಒಳಗೊಂಡಂತೆ ಐದು ಪ್ರಮುಖ ಸ್ಥಳಗಳಲ್ಲಿ ಹಬ್ಬಗಳನ್ನು ವಿಭಿನ್ನವಾಗಿ ಆಚರಿಸಲಾಯಿತು.
ಬಿಎಲ್‌ಆರ್ ಹಬ್ಬ -2024 ಯಶಸ್ವಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಬಿಎಲ್‌ಆರ್ ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ಹೇಳಿದರು. ಈ ಹಬ್ಬವು ಬೆಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಹಾಗೂ ಎಲ್ಲಾ ಸಮುದಾಯವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಿದ್ದು ಸಂತಸ ತಂದಿದೆ. ಸ್ವಯಂ ಸೇವಕರ ಸಹಕಾರದಿಂದ ಯಾವುದೇ ಅಡೆತಡೆ ಇಲ್ಲದೇ ಬಿಎಲ್‌ಆರ್‌ ಹಬ್ಬ ಯಶಸ್ವಿಯಾಗಿ ನಡೆದಿದ್ದು, ಬೆಂಗಳೂರಿನ ನೈಜ ಪರಂಪರೆಯನ್ನು ಜಾಗತಿಕವಾಗಿಯೂ ಪ್ರಚೂರ ಪಡಿಸಿದೆ. ಈ ಹಬ್ಬವನ್ನು ಇನ್ನಷ್ಟು ಪ್ರಭಾವಶಾಲಿಯಾಗಿಸಲು ಎಲ್ಲಾ ರೀತಿಯ ಕಲಾವಿದರ ಸಹಕಾರ ಪ್ರಶಂಸನೀಯ. ಇನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೂ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು. ಒಟ್ಟಾರೆ ಬಿಎಲ್‌ಆರ್‌ ಹಬ್ಬ ಎರಡನೇ ಆವೃತ್ತಿಯೂ ತೆರೆ ಕಂಡಿದ್ದು, ಇದರ ಭಾಗವಾದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು.

Also read: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಂತಾಪ

ಅನ್‌ಬಾಕ್ಸಿಂಗ್‌ಬಿಎಲ್‌ಆರ್‌ ಫೌಂಡೇಶನ್‌ನ ಸಹ-ಸಂಸ್ಥಾಪಕಿ ಮಾಲಿನಿ ಗೋಯಲ್ ಮಾತನಾಡಿ, ಬಿಎಲ್‌ಆರ್‌ ಹಬ್ಬ ಬೆಂಗಳೂರಿನ ಶ್ರೀಮಂತ ವೈವಿಧ್ಯತೆ, ಸೃಜನಶೀಲತೆ, ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿಯುತ್ತದೆ. ನಮ್ಮ ದೃಷ್ಟಿ ನಗರದ ಸಾಂಪ್ರದಾಯಿಕ ಪರಂಪರೆಯನ್ನು ಅದರ ಆಧುನಿಕ ಗುರುತಿನೊಂದಿಗೆ ಸುಂದರವಾಗಿ ಜೋಡಿಸುವ ಈ ಹಬ್ಬವು ನಮ್ಮೆಲ್ಲರನ್ನೂ ಮನಸೂರೆಗೊಳಿಸಿತು. ಪ್ರತಿಯೊಬ್ಬರೂ ಬಿಎಲ್‌ಆರ್‌ ಹಬ್ಬದಲ್ಲಿ ಪಾಲ್ಗೊಂಡು ನಮ್ಮ ಸಾಂಸ್ಕೃತಿಕ ಅನುಭವವನ್ನು ಪಡೆದುಕೊಂಡಿರುವುದು ಸಂತಸ. ನಗರದ ವಿಶಿಷ್ಟ ಚೈತನ್ಯವನ್ನು ಆಚರಿಸಲು ಒಗ್ಗೂಡಿದ ಬೆಂಗಳೂರಿನ ಜನರಿಗೆ ಅಭಿನಂದನೆಗಳು ಎಂದರು.

ಬಿಎಲ್‌ಆರ್‌ ಹಬ್ಬದ ಮೂಲಕ ಬೆಂಗಳೂರನ್ನು ದಕ್ಷಿಣ ಏಷ್ಯಾದಲ್ಲಿಯೇ ಸಾಂಸ್ಕೃತಿಕ ಕೇಂದ್ರವನ್ನಾಗಿ ಗುರುತಿಸಿ ಪ್ರವಾಸಿಗರನ್ನು ಇತ್ತ ಆಕರ್ಷಿಸುವುದು ಹಾಗೂ ಸ್ಥಳೀಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ನಮ್ಮ ಆದ್ಯತೆ. ಜೊತೆಗೆ, ಬೆಂಗಳೂರನ್ನು ಜಾಗತಿಕ ನಕ್ಷೆಯಲ್ಲಿ ಸಾಂಸ್ಕೃತಿಕ ಕೇಂದ್ರಬಿಂದುವಾಗಿ ಗುರುತಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ಬಿಎಲ್‌ಆರ್‌ ಹಬ್ಬದ ಪ್ರಾಯೋಜಕರಲ್ಲಿ ಗೋ ನೇಟಿವ್, ಝೆರೋಧಾ, ಮಣಿಪಾಲ್ ಫೌಂಡೇಶನ್ ಮತ್ತು ಪ್ರೆಸ್ಟೀಜ್ ಗ್ರೂಪ್ ಸೇರಿವೆ. ಕಾರ್ಯಕ್ರಮದ ಪ್ರಾಯೋಜಕರು ಗೀತಾಂಜಲಿ ವಿಕ್ರಮ್ ಕಿರ್ಲೋಸ್ಕರ್, ಪ್ರೊಸಸ್ ಮತ್ತು ಕ್ವೆಸ್ ಕಾರ್ಪೊರೇಷನ್ ಸೇರಿವೆ.

ಹೆಚ್ಚಿನ ಮಾಹಿತಿಗಾಗಿ ಮತ್ತು BLR ಹಬ್ಬಾದ ಸಂಕ್ಷಿಪ್ತ ಮಾಹಿತಿಗಾಗಿ https://www.instagram.com/blrhubba/?hl=en ವೆಬ್‌ಸೈಟ್‌ಗೆ ಭೇಟಿ ನೀಡಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಂತಾಪ

Next Post

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್’ಸಿಟಿ ಸೇರಿ ಹಲವು ರೈಲುಗಳ ತಾತ್ಕಾಲಿಕವಾಗಿ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್'ಸಿಟಿ ಸೇರಿ ಹಲವು ರೈಲುಗಳ ತಾತ್ಕಾಲಿಕವಾಗಿ ರದ್ದು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL