ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ತಪ್ಪಿಸಿಕೊಂಡಿರುವ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದಾರೆ.
ಈ ಕುರಿತಂತೆ ಲುಕ್ ಔಟ್ ನೋಟೀಸ್ ಜಾರಿಗೊಳಿಸಿರುವ ಚಂದ್ರಾ ಲೇಔಟ್ ಪೊಲೀಸರು, ತಲೆ ಮರೆಸಿಕೊಂಡಿರುವ ಅಭಿನಯ, ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜ್ ಅವರ ಸುಳಿವು ಸಿಕ್ಕಲ್ಲಿ ಕೂಡಲೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಅವರು ಹೈಕೋರ್ಟ್’ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ , ಅಭಿನಯ ಅವರ ತಾಯಿ ಜಯಮ್ಮಗೆ 5 ವರ್ಷ, ಅಭಿನಯ ಹಾಗೂ ಅವರ ಸಹೋದರ ಚೆಲುವರಾಜ್’ಗೆ 2 ವರ್ಷ ಶಿಕ್ಷೆ ವಿಧಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post