ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವೈಯಕ್ತಿಕ ಹಿತಾಸಕ್ತಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) PIL ಸಲ್ಲಿಸಿರುವುದು ಮೇಲ್ನೋಟಕ್ಕೆ ಸಾಬೀತಾದರೆ ಅರ್ಜಿದಾರರಿಗೆ ಕನಿಷ್ಠ 50 ಸಾವಿರ ರು. ದಂಡ ವಿಧಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಶುಕ್ರವಾರ ಕಲಾಪದ ವೇಳೆ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಸಂಬಂಧ ಅರ್ಜಿದಾರರ ಪರ ವಕೀಲರು ಹಾಜರಾಗಿ, ನಮ್ಮ ಮನವಿ ಈಡೇರಿದೆ. ಇದರಿಂದ ಅರ್ಜಿ ಹಿಂಪಡೆಯಲಾಗುವುದು ಎಂದು ತಿಳಿಸಿ ಮೆಮೊ ಸಲ್ಲಿಸಿದರು.
ಈ ನಡೆಯನ್ನು ಆಕ್ಷೇಪಿಸಿದ ನ್ಯಾಯಪೀಠ, ಒಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿ ಕೋರ್ಚ್ ಮುಂದೆ ವಿಚಾರಣೆ ನಡೆಯುತ್ತಿದ್ದ ಹಂತದಲ್ಲಿ ಅರ್ಜಿ ವಾಪಸ್ ಪಡೆಯಲು ಅವಕಾಶವಿಲ್ಲ. ಸಾರ್ವಜನಿಕ ಮಹತ್ವದ ವಿಷಯವನ್ನು ವಕೀಲರು ಅಥವಾ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಾಗ ಅದು ಕೋರ್ಚ್ ವ್ಯಾಪ್ತಿಗೆ ಒಳಪಟ್ಟವಿಷಯವಾಗುತ್ತದೆ.
Also read: ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್ ಅವರಿಗೆ ಕರ್ನಾಟಕ ಛಾಯಾರತ್ನ ಗೌರವ
ಒಂದು ವೇಳೆ ಅರ್ಜಿ ಹಿಂಪಡೆಯುವುದಾಗಿ ಮನವಿ ಮಾಡಿದರೆ, ಆ ಕ್ಷಣದಿಂದಲೇ ಅರ್ಜಿದಾರರು ಪ್ರಕರಣದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಳ್ಳುತ್ತಾರೆ. ಅರ್ಜಿದಾರರು ಪ್ರಕರಣದಲ್ಲಿ ಮುಂದುವರಿಯದಿದ್ದರೂ, ಕೋರ್ಚ್ ಆ ಅರ್ಜಿಯನ್ನು ಸ್ವಯಂ ಆಗಿ ವಿಚಾರಣೆ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿತು.
ಕೆಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ವೈಯಕ್ತಿಕ ಹಿತಾಸಕ್ತಿಯಿರುವ ಬಗ್ಗೆ ಅನುಮಾನ ಮೂಡಿದ ಮತ್ತು ಅರ್ಜಿ ವಾಪಸ್ ಪಡೆಯುವುದಾಗಿ ಅರ್ಜಿದಾರರ ಪರ ವಕೀಲರು ಮೆಮೊ ಸಲ್ಲಿಸಿದ ಬೆಳವಣಿಗೆ ನಡೆದ ಹಿನ್ನೆಲೆಯಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಎಚ್ಚರಿಕೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post