ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ, ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ರುದ್ರ ಗರುಡ ಪುರಾಣ” ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.
“ಚಂಬಲ್”, ” ಡಿಯರ್ ವಿಕ್ರಮ್” ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ.

“ಪೃಥ್ವಿ” ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ. ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ. ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.

ನಾಯಕಿ ಪ್ರಿಯಾಂಕ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.










Discussion about this post