ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 24ರಂದು ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ Ragini Dviwedi ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳ ಬಳಗದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಮೇ 24 ರಂದು ಬೆ10 ರಿಂದ ಸಂಜೆ 5 ರವರೆಗೂ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.
ಜನರಿಗೆ ಉಪಕಾರವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಗಿಣಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post