No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಸಿಎಂ

ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭು ಕೆಂಪೇಗೌಡ Kempegowda ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ ಮಾಡುವ ಮೂಲಕ ಪ್ರತಿ ಜನರ ಬದುಕಿಗೂ ಕೊಡುಗೆ ನೀಡಿದ್ದಾರೆ. ವಿಜಯನಗರ ಸಾಮ್ರಾಜ್ಯ, ಜನರನ್ನು ನಾಡು ಕಟ್ಟಲು ಬಳಕೆ ಮಾಡಿದ ಸುವರ್ಣ ಯುಗ. ಸಕಾರಾತ್ಕಕ ಧೋರಣೆಯಿಂದ ನಾಡನ್ನು ಕಟ್ಟಿದ ಶ್ರೇಯ ಕೆಂಪೇಗೌಡರಿಗೆ ಸಲ್ಲುತ್ತದೆ. ಕೆಂಪೇಗೌಡರು ಹಾಕಿರುವ ಯೋಜನೆಗಳು, ಕನಸುಗಳು, ಅವರು ಕಟ್ಟಿರುವ ನಾಡನ್ನು ನಾವು ಬೆಳೆಸಿರುವ ಬಗ್ಗೆ ಸಿಂಹಾವಲೋಕನ ಮಾಡುವ ಸಂದರ್ಭವಿದು. ಬೆಂಗಳೂರು ಅಂತರರಾಷ್ಟ್ರೀಯ ನಗರ. ಕೆಂಪೇಗೌಡರು ಕೆರೆಕಟ್ಟೆಗಳನ್ನು, ಗ್ರಾಮಗಳನ್ನು ಕಟ್ಟಿದ್ದಾರೆ. ಸಮುದಾಯಗಳಿಗೆ ಹಾಗೂ ವ್ಯಾಪಾರಗಳಿಗೆ ಅವಕಾಶಗಳನ್ನು ಪೂರೈಸಿದ ದೂರದೃಷ್ಟಿಯ ನಾಯಕರಾಗಿದ್ದರು ಎಂದರು.
ವಿಸ್ತರಣೆಯಾಗಿರುವ ಬೆಂಗಳೂರಿಗೆ ಉತ್ತಮ ಮೂಲಭೂತ ಸೌಕರ್ಯ ಪೂರೈಕೆ:
ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದರ ಬಗ್ಗೆ ಸ್ಪಷ್ಟತೆ ಪಡೆದು ಕೆಲಸ ಮಾಡಿದರೆ ಯಾವುದೇ ಸಮಸ್ಯೆಯನ್ನೂ ಪರಿಹರಿಸಬಹುದು. ಸಮಸ್ಯೆಗಳನ್ನು ಆಯಾ ಕಾಲದಲ್ಲಿಯೇ ಪರಿಹರಿಸಬೇಕು. ಪ್ರತಿದಿನ 5 ಸಾವಿರಕ್ಕಿಂತ ಹೆಚ್ಚು ಹೊಸ ವಾಹನಗಳು ರಸ್ತೆಗೆ ಇಳಿಯುತ್ತವೆ. ಬೆಂಗಳೂರು ನಗರದಲ್ಲಿ ಜನರಿಗಿಂತ ವಾಹನಗಳ ಸಂಖ್ಯೆ ಜಾಸ್ತಿಯಾಗಿರುವುದು ವಾಸ್ತವಾಂಶ. ಬೆಂಗಳೂರಿನ ವಿಸ್ತರಣೆ ಬಹಳಷ್ಟು ಆಗಿದೆ. ಬೆಂಗಳೂರಿನಿಂದ 30-40 ಕಿ.ಮೀ. ವರೆಗೂ ನಗರ ಬೆಳೆದಿದ್ದು, ರಸ್ತೆ, ನೀರು,ಮೂಲಭೂತ ಸೌಕರ್ಯಗಳನ್ನು ಪೂರೈಸಬೇಕಿದೆ. ಸಮಸ್ಯೆಯನ್ನು ಗುರುತಿಸಿ ಪರಿಹಾರ ನೀಡಬೇಕಿದೆ. ಬೆಂಗಳೂರಿಗೆ ಮುಂದಿನ 40 ವರ್ಷಗಳವರೆಗೂ ಬಳಸಬಹುದಾದಂತಹ ಉತ್ತಮ ಸಾರಿಗೆ ವ್ಯವಸ್ಥೆ, ಗಟ್ಟಿಮುಟ್ಟಾದ ರಸ್ತೆ, ಮೂಲಭೂತ ಸೌಕರ್ಯ ಹಾಗೂ ಸ್ಯಾಟಿಲೈಟ್ ಟೌನ್‍ಗಳನ್ನು ನಿರ್ಮಿಸುವ ಚಿಂತನೆ. ಬೆಂಗಳೂರು ನಗರದಲ್ಲಿ ಸಾರಿಗೆಯನ್ನು ಸರಾಗಗೊಳಿಸಿ, ನಗರವನ್ನು ಅಭಿವೃದ್ಧಿಗೊಳಿಸಲು ಚಿಂತಿಸಲಾಗುತ್ತಿದೆ ಎಂದರು.

ಬೆಂಗಳೂರನ್ನು ನಾಲ್ಕು ದಿಕ್ಕುಗಳಿಂದಲೂ ಅಭಿವೃದ್ಧಿಗೊಳಿಸುವ ಉದ್ದೇಶ :
ಬೆಂಗಳೂರಿನಲ್ಲಿ ವಿವಿಧ ರಂಗಗಳಿಗೆ ಸಂಬಂಧಿಸಿದ 400 ವಿಶ್ವಮಟ್ಟದ ಸಂಶೋಧನಾ ಕೇಂದ್ರಗಳಿವೆ. 400 ಕ್ಕೂ ಹೆಚ್ಚು ಫಾರ್ಚೂನ್ ಕಂಪನಿಗಳಿವೆ. ಶೇ.43 ರಷ್ಟು ಎಫ್‍ಡಿಐ ಕರ್ನಾಟಕದಲ್ಲಿ ಆಗುತ್ತಿದೆ. ಇವುಗಳಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ನೀಡುವ ಮೂಲಕ ಆಧುನಿಕ ಬೆಂಗಳೂರನ್ನು ನಿರ್ಮಿಸಲು ಸಾಧ್ಯ. ಬೆಂಗಳೂರಿನಲ್ಲಿನ ನಮ್ಮತನವನ್ನು ಉಳಿಸಿಕೊಂಡು ನಗರವನ್ನು ಅಭಿವೃದ್ಧಿಗೊಳಿಸುವ ದೃಷ್ಟಿಕೋನವಿರಬೇಕು. ಬೆಂಗಳೂರು ನಾಲ್ಕು ದಿಕ್ಕುಗಳಿಂದಲೂ ಬೆಳೆಯಬೇಕು ಎಂಬ ನಾಡಪ್ರಭು ಕೆಂಪೇಗೌಡರ ಉದ್ದೇಶವಾಗಿತ್ತು. ಇದೇ ಮಾದರಿಯಲ್ಲಿ ಎಲ್ಲ ಸವಲತ್ತುಗಳಿರುವ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸುವ ಸರ್ಕಾರದ ಚಿಂತನೆ ಕೆಂಪೇಗೌಡರೇ ಪ್ರೇರಣೆಯಾಗಿದ್ದಾರೆ ಎಂದರು.
ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿ ಬೆಂಗಳೂರಿನ ಅಭಿವೃದ್ಧಿಗೆ ಕಾರಣ :
ಕೆಂಪೇಗೌಡರ ಪ್ರಶಸ್ತಿಗೆ ಮಹತ್ವವನ್ನು ತಂದುಕೊಡುವ ಕೆಲಸ ಅವರಿಂದಾಗಿದೆ. ಐಟಿ ಕ್ಷೇತ್ರವನ್ನು ಉತ್ಕಷ್ಟ ಮಟ್ಟಕ್ಕೆ ತಂದವರು ಎಸ್.ಎಂ.ಕೃಷ್ಣಾ ಅವರು. ಬೆಂಗಳೂರನ್ನು ಸಿಂಗಪೂರ್ ಮಾಡುವುದಾಗಿ ಅಂದು ಅವರು ಹೇಳಿದ್ದರು. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಬೆಂಗಳೂರನ್ನು ಸಿಂಗಾಪುರ ಮಾದರಿಯಲ್ಲಿ ಬೆಳೆಸಬಹುದಾಗಿತ್ತು. ಈಗಲಾದರೂ ದೂರದೃಷ್ಟಿಯಿಂದ ಕೆಲಸ ಮಾಡುವ ಅವಶ್ಯಕತೆ ಮತ್ತು ಅನಿವಾರ್ಯತೆ ಇದೆ. ಅವರ ದೂರದೃಷ್ಟಿ, ಕ್ರಿಯಾಶೀಲತೆ, ಬದ್ಧತೆ ಇವೆಲ್ಲವೂ ಬೆಂಗಳೂರಿನ ಅಭಿವೃದ್ಧಿಗೆ ಕಾರಣವಾಗಿವೆ. ಬೆಂಗಳೂರಿನ ಅಭಿವೃದ್ಧಿಯಲ್ಲಿ ಯುವಕರು, ಸಮಾಜಸೇವಕರ ಪಾತ್ರ ದೊಡ್ಡದಿದೆ ಎಂದರು.

Also read:ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ದೇಶದಲ್ಲಿಯೇ ಅತ್ಯುತ್ತಮ ವಿಮಾನ ನಿಲ್ದಾಣ:
ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಬಹುತೇಕ ಟರ್ಮಿನಲ್ -2 ಉದ್ಘಾಟನೆಯ ಸಂದರ್ಭದಲ್ಲಿ ಅನಾವರಣ ಮಾಡಲಾಗುವುದು. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಮಾಡಿಸುವ ಉದ್ದೇಶವಿದೆ. ಪ್ರತಿಮೆ ಕಾರ್ಯಕ್ಕೆ ಈಗಾಗಲೇ ಸುಮಾರು 85 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ 23 ಕೋಟಿ ರೂ. ಗಳನ್ನು ಸೌಂದರ್ಯೀಕರಣಕ್ಕೆ ಬಿಡುಗಡೆ ಮಾಡಲಾಗಿದೆ. ಕೆಂಪೇಗೌಡರ ಇತಿಹಾಸವನ್ನು ಬಿಂಬಿಸುವ ಕೆಲಸವನ್ನೂ ಇದು ಒಳಗೊಂಡಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ -2 ಸಿದ್ಧವಾದಾಗ ದೇಶದಲ್ಲಿಯೇ ಅತ್ಯುತ್ತಮ ವಿಮಾನನಿಲ್ದಾಣವಾಗಲಿದೆ. ಆ ಸಂದರ್ಭದಲ್ಲಿ ಕೆಂಪೇಗೌಡದ ಹೆಸರು ಶಾಶ್ವತವಾಗಿ ಉಳಿಯುವಂಥ ಕೆಲಸವಾಗಿದೆ. ನಾಡು ಕಟ್ಟಿದ ಕೆಂಪೇಗೌಡರ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವ ಕೆಲಸವಾಗಿದೆ ಎಂದರು.
ಯುವಕರ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಹತ್ವ :
ಮಾಗಡಿಯಲ್ಲಿ ಸುಮಾರು 50 ಕೋಟಿ ರೂ.ಗಳ ವೆಚ್ಚದಲ್ಲಿ ನಾಡಪ್ರಭುಗಳ ಇತಿಹಾಸ ಬಿಂಬಿಸುವ ಕೆಲಸವಾಗುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಂಪೇಗೌಡರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕೆಂದು 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 100 ಕೋಟಿ ರೂ.ಗಳ ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣ ಮಾಡುತ್ತೇವೆ. ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 150 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಸಮುದಾಯವನ್ನು ಕಟ್ಟಲೆಂದು ಯುವಕರ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಹತ್ವ ನೀಡಲಾಗುತ್ತಿದೆ. ಇದರ ರೂಪುರೇಷೆಗಳನ್ನು ಸಿದ್ಧಪಡಿಸಿ ಜುಲೈ ತಿಂಗಳಲ್ಲಿ ಅದಕ್ಕೆ ಚಾಲನೆ ನೀಡಲಾಗುವುದು ಎಂದರು.

ಕೆಂಪೇಗೌಡರು ಇಡೀ ನಾಡಿಗೆ ಸೇರಿದವರು. ಕೆಂಪೇಗೌಡರ ಕೀರ್ತಿ, ಶ್ರೇಯಸ್ಸಿಗೆ ಇನ್ನಷ್ಟು ಮೆರಗು ಕೊಡುವ ರೀತಿಯಲ್ಲಿ ಕರ್ನಾಟಕವನ್ನು ಕಟ್ಟಬೇಕಿದೆ. ಆಡಳಿತ ಮಾಡುವ ಸಂದರ್ಭದಲ್ಲಿ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ. ಹಲವಾರು ಸವಾಲುಗಳಿವೆ. ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಕರ್ನಾಟಕದ ಅಭಿವೃದ್ಧಿ ಮಾಡುತ್ತೇವೆ, ನವ ಕರ್ನಾಟಕದಿಂದ ನವ ಭಾರತದ ಅಭಿವೃದ್ಧಿ ಮಾಡುತ್ತೇವೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteKempegowdaLatest News KannadaNewsinKannadaNewsKannadaState Newsಕೆಂಪೇಗೌಡಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share199Tweet123Send
Previous Post

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Next Post

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL