ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್’ವೊಂದರಲ್ಲಿ ವಿದ್ಯಾರ್ಥಿಯೊಬ್ಬರ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ನಿತಿನ್ ಇಂದು ಗುರುತಿಸಲಾಗಿದ್ದು, ಈತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಎಸ್ ಪ್ರಥಮ ವರ್ಷಕ್ಕೆ ದಾಖಲಾಗಿದ್ದ ಎಂದು ವರದಿಯಾಗಿದೆ.
ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿದ್ದ ನಿತಿನ್ ಇಂದು ಮುಂಜಾನೆಯಾದರೂ ಹೊರ ಬಂದಿರಲಿಲ್ಲ. ಹೀಗಾಗಿ, ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Also read: ಮಡಿಕೇರಿ: ನಬಾರ್ಡ್ ವತಿಯಿಂದ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post