ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಫ್ಲೈ ಓವರ್ ಬಳಿಯಲ್ಲಿ ಎರಡು ಬೈಕ್’ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ಚಿಕ್ಕಪೇಟೆಯ ಅಮಿತ್ (32) ಹಾಗೂ ಅನಿತಾ(5) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಮಹಿಳೆ ಕುಸುಮಾ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್’ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
Also read: ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿತ: ಸಾರ್ವಜನಿಕರಿಂದ ಯುವಕನಿಗೆ ಥಳಿತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post