ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ DKShivakumar ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ನ ಗಾಜು ಪುಡಿಪುಡಿಯಾಗಿರುವ ಘಟನೆ ನಡೆದಿದೆ.
ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ಹಿನ್ನೆಲೆ ಮುಳುಬಾಗಿಲಿಗೆ ತೆರಳಲು ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಪೈಲಟ್ನ ಸಮಯಪ್ರಜ್ಞೆಯಿಂದ ಯಾವುದೇ ದೊಡ್ಡಮಟ್ಟದ ಹಾನಿ ಸಂಭವಿಸಿಲ್ಲ. ಓರ್ವ ಸಹ ಪ್ರಯಾಣಿಕನಿಗೆ ಸಣ್ಣಪುಟ್ಟದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Also read: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿರುವ ಯೋಜನೆಗಳೇನು? ವಿವರ ಇಲ್ಲಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post