ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾಲ್ವರು ಯುವಕರು ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಘಟನೆ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆ ಸುಮಾರಿಗೆ ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನು ನಾಲ್ವರು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಈ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿ, ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.
Also read: ಎ.2ರಂದು ಯುಕೆಜಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರದಾನ ಕಾರ್ಯಕ್ರಮ
ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post