ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಗೌರವಯುತವಾಗಿ ಕೆಲಸಕ್ಕೆ ಹಾಜರಾಗುವಂತೆ ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಗೌರವದಿಂದ ಬಂದು ಕೆಲಸ ಮಾಡಬೇಕು. ಯಾರು ಬಂದಿಲ್ಲ ಅವರಿಗೆ ಸಂಬಳ ಕೊಡುವ ಪ್ರಶ್ನೆಯೇ ಇಲ್ಲ. ಹಾಗೂ ಕೆಲಸಕ್ಕೆ ಹಾಜರಾಗದ ನೌಕರರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಾವು ಯಾರ ಜೊತೆಯೂ ಮಾತನಾಡಲು ಸಿದ್ದವಿಲ್ಲ. ಯಾವುದೇ ತಕರಾರು ಮಾಡದೇ ಸಾರಿಗೆ ಬಸ್ಸುಗಳ ಸಂಚಾರ ಪ್ರಾರಂಭಿಸಿ. ಇಲ್ಲವಾದಲ್ಲಿ ಮುಂದೆ ಆಗುವ ಕ್ರಮಗಳಿಗೆ ನೀವೇ ಹೊಣೆಗಾರರು. ಇದಕ್ಕೆ ಸಂಬಂಧಪಟ್ಟಂತೆ ಸೂಕ್ತವಾದ, ಬಿಗಿ ಕ್ರಮ ಕೈಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂಪ್ಪ ಹೇಳಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















