ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 90 ಕೋಟಿ ರೂ. ಅಕ್ರಮವಾಗಿ ವರ್ಗಾವಣೆ ಮಾಡಲಾಗಿದ್ದು, ಈ ಹಣವನ್ನು ವಿವಿಧ ರೀತಿಯಲ್ಲಿ ಐಷಾರಾಮಿಗಾಗಿ ಬಳಕೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಈ ಕುರಿತಂತೆ ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಾಗಿ ಮದ್ಯ ಖರೀದಿ ಹಾಗೂ ದುಬಾರಿ ಬೆಲೆಯ ವಾಹನಗಳನ್ನು ಖರೀದಿಸಲಾಗಿದೆ ಎಂದು ತಿಳಿಸಿದೆ.
ಏನೆಲ್ಲಾ ಐಷಾರಾಮಿ ಮಾಡಿದ್ದಾರೆ?
ಅಕ್ರಮವಾಗಿ ವರ್ಗಾವಣೆ ಮಾಡಲಾದ ಹಣವನ್ನು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಂಚಲು ಅಪಾರ ಪ್ರಮಾಣದ ಮದ್ಯವನ್ನು ಖರೀದಿಸಲಾಗಿತ್ತು ಎಂದು ಆರೋಪಿಸಲಾಗಿದೆ.
Also read: ಡಿಸಿಎಂ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಶಾಸಕ ಚನ್ನಬಸಪ್ಪ | ಏನೆಲ್ಲಾ ಮನವಿ ಮಾಡಿದ್ದಾರೆ?
ಅಲ್ಲದೇ, ಲ್ಯಾಂಬೋರ್ಗಿನಿ ಸೇರಿದಂತೆ ಹಲವು ಐಷಾರಾಮಿ ಕಾರುಗಳನ್ನೂ ಸಹ ಖರೀದಿಯನ್ನು ಇದೇ ಹಣದಲ್ಲಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಇಡಿ ಮಾಡಿರುವ ಈ ಆರೋಪಗಳ ಮೂಲಕ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಕೈವಾಡ ಇರುವುದು ಖಚಿತವಾಗಿದೆ.
ಅಕ್ರಮದಲ್ಲಿ 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಉಲ್ಲೇಖಿಸಿದೆ.
ಹಗರಣದ ತನಿಖೆಯ ಭಾಗವಾಗಿ 4 ರಾಜ್ಯಗಳು ಸೇರಿ ಒಟ್ಟು 23 ಕಡೆ ದಾಳಿ ನಡೆಸಿದೆ. ಇದಲ್ಲದೇ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವುದು ತಿಳಿದುಬಂದಿದೆ.
ಈ ಬಗ್ಗೆ ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಮನೆಯಲ್ಲಿ ಅನೇಕ ದಾಖಲೆಗಳು ದಾಳಿ ವೇಳೆ ಪತ್ತೆಯಾಗಿವೆ ಎಂದು ಇಡಿ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post