No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಭಂಡಾರಕೇರಿ ಮಠದಲ್ಲಿ ವಿದುಷಿ ಶುಭಾ, ಪಂಡಿತ ಕೃಷ್ಣಾಚಾರ್ಯರಿಗೆ ಸನ್ಮಾನ

kalpa News by kalpa News
February 20, 2024
in ಬೆಂಗಳೂರು ನಗರ
0
ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ ವಿದ್ಯಾಮಾನ್ಯ’ ಬಿರುದನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿ ಗೌರವಿಸಿದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದ್ವೈತ ಮತ ಸಿದ್ಧಾಂತ ಪ್ರತಿಪಾದಿಸಿದ ಆಚಾರ್ಯ ಶ್ರೀ ಮಧ್ವರ ತತ್ವ ಮತ್ತು ಸಂದೇಶಗಳು ಎಲ್ಲ ದೇಶ- ಕಾಲಕ್ಕೂ ಅನ್ವಯ ಎಂದು ಉಡುಪಿ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ Shri Vidyeshathirtha Swamiji of Udupi Bandarakeri Mutt ಹೇಳಿದರು.

ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ ವೀಣಾ ವಿದುಷಿ, ಸಂಗೀತ ಸಂಯೋಜಕಿ ಮತ್ತು ಗಾಯಕಿ ವಿದುಷಿ ಶುಭಾ ಸಂತೋಷ್ ಅವರಿಗೆ ‘ರಾಮ ಲಾಲಿತ ವೀಣಾ ಮಾನ್ಯ’ ಪ್ರಶಸ್ತಿಯನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿದರು.

ಮಧ್ವ ನವಮಿ ಅಂಗವಾಗಿ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಅವರು ವಿವಿಧ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.
ಶ್ರೀ ಮಧ್ವರ (ಆನಂದತೀರ್ಥರ) ಸಿದ್ಧಾಂತದಲ್ಲಿ ತತ್ವಜ್ಞಾನದೊಂದಿಗೆ ವೈಜ್ಞಾನಿಕ ಅಂಶಗಳು ಹೇರಳವಾಗಿವೆ. ಅವರ ಸಂದೇಶಗಳನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ. ಮಧ್ವರು ಮಹಾಭಾರತಕ್ಕೆ 10 ವಿಶೇಷ ಅರ್ಥಗಳನ್ನು ಹೇಳಿದ್ದಾರೆ. 10 ಉಪನಿಷತ್ತುಗಳ ಅರ್ಥ ಜಗತ್ತಿಗೆ ತಿಳಿಯುವಂತೆ ಭಾಷ್ಯ ಬರೆದಿದ್ದಾರೆ. 10 ಯತಿಗಳಿಗೆ ಸನ್ಯಾಸ ದೀಕ್ಷೆಯೊಂದಿಗೆ ಧರ್ಮದ ಉಪದೇಶ ನೀಡಿ ಪರಂಪರೆ ಬೆಳೆಸಿದ್ದಾರೆ. ಹಾಗಾಗಿ ಅವರಿಗೆ ದಶಪ್ರಮತಿ ಮತ್ತು ಪೂರ್ಣಪ್ರಜ್ಞ ಎಂಬ ಹೆಸರುಗಳು ಅನ್ವರ್ಥವಾಗಿವೆ. ಲೋಕಕ್ಕೆ ಆನಂದಕರವಾದ ಶಾಸ್ತ್ರ, ವ್ಯಾಖ್ಯಾನ ಮತ್ತು ನಿರ್ಣಯಗಳನ್ನು ನೀಡಿದ ಕಾರಣಕ್ಕಾಗಿ ಅವರಿಗೆ ಆನಂದತೀರ್ಥ ಎಂಬ ನಾಮವೂ ಭೂಷಣಪ್ರಾಯವಾಗಿದೆ ಎಂದು ಶ್ರೀ ವಿದ್ಯೇಶತೀರ್ಥರು ಹೇಳಿದರು.

Also read: ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

ಭಾರತೀಯ ವೇದಾಂತ ರಂಗದಲ್ಲಿ ಆಚಾರ್ಯ ಮಧ್ವರು ದುಂಬಿಯಂತೆ ಶ್ರಮಿಸಿ, ವೇದಗಳಲ್ಲಿ ಅಡಗಿರುವ ಭಗವಂತನ ಗುಣ ಎಂಬ ಮಧುವನ್ನು ಗ್ರಹಣ ಮಾಡಿ ‘ಸರ್ವಮೂಲ’ ಎಂಬ ಕೋಶದಲ್ಲಿ ಸಂಗ್ರಹಿಸಿ ವಿಶ್ವಕ್ಕೆ ‘ಪೂರ್ಣ ಪ್ರಜ್ಞ’ ದೃಷ್ಟಿಯನ್ನು ದಯಪಾಲಿಸಿದ್ದು ಮಹೋನ್ನತ ಕಾರ್ಯ. ಇಂಥ ಮಧುವನ್ನು ನೀಡಿದ ಕಾರಣಕ್ಕಾಗಿ ಅವರು ಮಧ್ವರಾದರು. ಹಾಗಾಗಿಯೇ ಅವರ ಪ್ರತಿಮೆಗೆ ಸ್ಮರಣಾರ್ಥವಾಗಿ ಮಧು ಅಭಿಷೇಕ ಮಾಡುವುದು ಧನ್ಯತೆ ಸಮರ್ಪಣೆಯ ಸಂಕೇತ ಎಂದು ಶ್ರೀ ವಿದ್ಯೇಶತೀರ್ಥರು ವ್ಯಾಖ್ಯಾನಿಸಿದರು.

ಮಧ್ವ ನವಮಿ ಉತ್ಸವ ಅಂಗವಾಗಿ ಅವರ ಮಹತ್ತರ ಕೃತಿಗಳನ್ನು ಅಧ್ಯಯನ ಮಾಡಬೇಕು. ವಿದ್ವಜ್ಜನರಿಗೆ ಗೌರವಿಸಬೇಕು. ಭಾರತೀಯ

ಸನಾತನ ಪರಂಪರೆಯ ರಾಯಭಾರಿಗಳಾದ ಪಂಡಿತರಿಗೆ ಸನ್ಮಾನಿಸಬೇಕು. ಈ ಮೂಲಕ ಮಧ್ವ ಶಾಸ್ತ್ರ, ದಾಸ ಸಾಹಿತ್ಯ ಮತ್ತು ವಿದ್ಯೇಶ ವಿಠಲಾಂಕಿತ ಕೃತಿಗಳ ಪ್ರಚಾರ, ಪ್ರಸಾರಕ್ಕೆ ಬೆಂಬಲಿಸಬೇಕು. ಆಗ ಮಾತ್ರ ಉತ್ಸವ, ಗುರು ಸ್ಮರಣೆ, ಆರಾಧನೆಗಳು ಅರ್ಥಪೂರ್ಣವಾಗುತ್ತವೆ ಎಂದರು.
ಪ್ರಶಸ್ತಿ ಪ್ರದಾನ:
ವೀಣಾ ವಿದುಷಿ, ಸಂಗೀತ ಸಂಯೋಜಕಿ ಮತ್ತು ಗಾಯಕಿ ವಿದುಷಿ ಶುಭಾ ಸಂತೋಷ್ ಅವರು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆ ಮತ್ತು ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲೇ ವೀಣಾ ವಾದನ ಸೇವೆ ಸಮರ್ಪಿಸಿ ಕರ್ನಾಟಕದ ಕೀರ್ತಿಯನ್ನು ಬೆಳಗಿದ ಸವಿ ನೆನಪಿಗಾಗಿ ಅವರಿಗೆ ‘ರಾಮ ಲಾಲಿತ ವೀಣಾ ಮಾನ್ಯ’ ಪ್ರಶಸ್ತಿಯನ್ನು ಶ್ರೀಗಳು ಪ್ರದಾನ ಮಾಡಿ ಗೌರವಿಸಿದರು.

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ ವಿದ್ಯಾಮಾನ್ಯ’ ಬಿರುದು ಪ್ರದಾನ ಮಾಡಿ ಸನ್ಮಾನಿಸಿದರು.

ಕೆಎಎಸ್ ಅಧಿಕಾರಿ ಅನಿಲ್ ಕುಮಾರ ಮರಳಿ, ಮಠದ ವಿದ್ವಾಂಸರು, ಪಂಡಿತರು ಮತ್ತು ನೂರಾರು ಭಕ್ತರು ಹಾಜರಿದ್ದರು. ನಂತರ ಗುರು ವಿಜಯ ಗೀತೆ ಸಾಮೂಹಿಕ ಪಾರಾಯಣ, ಶ್ರೀ ಕೃಷ್ಣನ ವಿಗ್ರಹ ಮತ್ತು ಪ್ರಾಣ ದೇವರ ವಿಗ್ರಹಗಳಿಗೆ ಮಧು ಅಭಿಷೇಕ, ಸುಮಧ್ವ ವಿಜಯ ಪಾರಾಯಣ, ಸಂಸ್ಥಾನ ಪೂಜೆ, ಪ್ರಸಾದ ವಿನಿಯೋಗ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Vidyeshathirtha Swamiji of Udupi Bandarakeri Muttಉಡುಪಿ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

Next Post

ಫೆ.22 | ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಿಷ್ಯ ಸ್ವೀಕಾರ | ಯಾರು ನೂತನ ಉತ್ತರಾಧಿಕಾರಿ?

kalpa News

kalpa News

Next Post
ಫೆ.22 | ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಿಷ್ಯ ಸ್ವೀಕಾರ | ಯಾರು ನೂತನ ಉತ್ತರಾಧಿಕಾರಿ?

ಫೆ.22 | ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಿಷ್ಯ ಸ್ವೀಕಾರ | ಯಾರು ನೂತನ ಉತ್ತರಾಧಿಕಾರಿ?

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL