ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುಂತಾದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.
ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರಿಗೆ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರು ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post