ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) #Bank Janardhan ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ನಟನ ನಿಧನಕ್ಕೆ ಕನ್ನಡ ಚಿತ್ರರಂಗ #Kannada Film Industry ಕಂಬನಿ ಮಿಡಿದಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಅವರಿಗೆ ತಡರಾತ್ರಿ ರಾತ್ರಿ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆತಂದಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬ್ಯಾಂಕ್ ಜನಾರ್ಧನ್ ನಿಧನಕ್ಕೆ ಹಿರಿಯ ನಟ ಜಗ್ಗೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ.. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ.. ಆತ್ಮಕ್ಕೆ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇನ್ನೂ ತಂದೆ ಸಾವಿನ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ಧನ್ ಅವರ ಪುತ್ರ ಗುರುಪ್ರಸಾದ್, 20 ದಿನಗಳಿಂದ ಆಸ್ಪತ್ರೆಗೆ ಹೋಗ್ತಾ ಇದ್ರು, ಸಾಕಷ್ಟು ಟ್ರೀಟ್ಮೆಂಟ್ ಕೊಡಿಸಿದ್ದೇವು. ಮೂರು ದಿನಗಳಿಂದ ಆರೋಗ್ಯ ಸಮಸ್ಯೆ ಏರುಪೇರು ಆಗುತ್ತಿತ್ತು. ಆಸ್ಪತ್ರೆಗೆ ದಾಖಲು ಮಾಡಿದ್ವು, ನಿನ್ನೆ ತುಂಬಾ ಉಸಿರಾಟದ ಸಮಸ್ಯೆಯಾಗಿತ್ತು. ವೈದ್ಯರು ಕೂಡ ತುಂಬಾ ಪ್ರಯತ್ನ ಪಟ್ಟಿದ್ರು. ಆದ್ರೆ ಉಳಿಸಿಕೊಳ್ಳಲು ಆಗಲಿಲ್ಲ ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post