ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ Australia Cricket Player Michel Marsh ವಿಶ್ವಕಪ್ ಟ್ರೋಫಿ World Cup Trophy ಮೇಲೆ ಕಾಲಿಟ್ಟು ಉದ್ಧಟತನ ಮೆರೆದ ನಡೆಯನ್ನು ನಟ ಚೇತನ್ ಅಹಿಂಸಾ ಸಮರ್ಥಿಸಿಕೊಂಡಿದ್ದಾರೆ.
Aussie cricketer w/ feet on WC trophy is in news
Brahminical notion of body parts being pure or impure such as right vs left hand or head vs feet is Indian majoritarian culture
In West, people wear shoes in home & even in bedroom!
To him, it wasn’t disrespect; just relaxation
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 21, 2023
ಈ ಕುರಿತಂತೆ ಟ್ವೀಟ್ ಮಾಡಿರುವ ಚೇತನ್, ವಿಶ್ವಕಪ್ ಟ್ರೋಫಿಯ ಮೇಲೆ ಕಾಲಿಟ್ಟಿರುವ ಚಿತ್ರದೊಂದಿಗೆ ಆಸ್ಟ್ರೇಲಿಯಾದ ಕ್ರಿಕೆಟಿಗನೊಬ್ಬ ಸುದ್ದಿಯಲ್ಲಿದ್ದಾರೆ. ಬಲಗೈ ಮತ್ತು ಎಡಗೈ ಅಥವಾ ತಲೆ ಮತ್ತು ಕಾಲುಗಳಂತಹ ದೇಹದ ಭಾಗಗಳು `ಶುದ್ಧ ಅಥವಾ ಅಶುದ್ಧವಾಗಿವೆ’ ಎಂಬ ಬ್ರಾಹ್ಮಣ್ಯದ ಶ್ರೇಣಿಕೃತ ವ್ಯವಸ್ಥೆಯ ಕಲ್ಪನೆಯು ಭಾರತೀಯ ಬಹುಸಂಖ್ಯಾತ ಸಂಸ್ಕೃತಿಯಾಗಿದೆ ಎಂದಿದ್ದಾರೆ.
Also read: ಹಿಂದೂ ದೇಗುಲಗಳಲ್ಲಿ ಕೆಲಸ ಮಾಡಲು ಅನ್ಯ ಧರ್ಮೀಯರು ಅರ್ಹರಲ್ಲ: ಹೈಕೋರ್ಟ್
ಪಶ್ಚಿಮದಲ್ಲಿ, ಜನರು ಮನೆಯೊಳಗೆ ಮತ್ತು ಮಲಗುವ ಕೋಣೆಯಲ್ಲಿಯೂ ಶೂಗಳನ್ನು ಧರಿಸುತ್ತಾರೆ. ಆಸ್ಟ್ರೇಲಿಯಾದ ಆಟಗಾರನಿಗೆ, ಟ್ರೋಫಿಯ ಮೇಲೆ ಕಾಲುಗಳನ್ನು ಇಡುವುದು ಅಗೌರವವಾಗಿರಲಿಲ್ಲ ಅದು ಕೇವಲ ಅವರ ವಿಶ್ರಾಂತಿ ಆಗಿತ್ತು ಎಂದು ಚೇತನ್ ಸಮರ್ಥಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post