ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದೂಗಳ ಭಾವನೆಗೆ ತಮ್ಮ ಟ್ವೀಟ್ ಮೂಲಕ ಧಕ್ಕೆ ತರಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಚಿತ್ರನಟ, ಹೋರಾಟಗಾರ ಚೇತನ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸರು ಇಂದು ಬಂಧಿಸಿದ್ದಾರೆ.
ಬಜರಂಗದಳದ ಶಿವಕುಮಾರ್ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಶೇಷಾದ್ರಿಪುರಂ ಪೊಲೀಸರು ಚೇತನ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಚೇತನ್‌ಗೆ 14ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಚೇತನ್ ಕುಮಾರ್ ಅವರು, ಮಾರ್ಚ್ 21ರಂದು ಮಾಡಿದ್ದ ಟ್ವೀಟ್‌ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದು ಸಮಾಜದ ಶಾಂತಿ ಕದಡಲು ದಾರಿಯಾಗುವುದು ಎಂದು ಶಿವಕುಮಾರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















