ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆಗೆ #Renukaswamy Murder Case ಸಂಬಂಧಿಸಿದಂತೆ ನಟ ದರ್ಶನ್ #Actor Darshan ಸೇರಿ 9 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ 42ನೇ ಎಸಿಎಂಎಂ ನ್ಯಾಯಾಲಯ ದರ್ಶನ್, ಪವಿತ್ರಾ ಸೇರಿ 9 ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದೆ.
ಪ್ರಕರಣ ಕುರಿತಂತೆ ತನಿಖೆ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಳ್ಳಲು ಇನ್ನೂ ಕಾಲಾವಕಾಶ ಅಗತ್ಯವಿದೆ. ಅಲ್ಲದೇ, ವಿಚಾರಣೆಗೆ ಹಲವು ಅರೋಪಿಗಳು ಸಹಕಾರ ನೀಡುತ್ತಿಲ್ಲ, ಮಾಹಿತಿ ಬಾಯಿ ಬಿಡುತ್ತಿಲ್ಲ. ಹೀಗಾಗಿ, ಇನ್ನೂ ಹೆಚ್ಚಿನ ಕಾಲವಕಾಶ ಅಗತ್ಯ ಎಂದು ಸರ್ಕಾರಿ ವಕೀಲರು ಮನವಿ ಮಾಡಿದ್ದರು.
Also read: ಶಿಕಾರಿಪುರ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ
ಪ್ರಮುಖವಾಗಿ, ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವ ವೇಳೆ ದರ್ಶನ್ ಹಾಗೂ ಗ್ಯಾಂಗ್ ಎಲೆಕ್ಟ್ರಾನಿಕ್ ಡಿವೈಸ್ ಬಳಕೆ ಮಾಡಿ ಆತನಿಗೆ ಕರೆಂಟ್ ಶಾಕ್ ನೀಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ ಎಂದು ತಿಳಿದುಬಂದಿದ್ದು, ವಿಚಾರಣೆ ನಡೆಸಿ, ಈ ಡಿವೈಸನ್ನು ಪೊಲೀಸರು ವಶಕ್ಕೆ ಪಡೆಯಬೇಕಿದೆ ಎಂದು ಹೇಳಲಾಗಿದೆ.
ಇದರೊಂದಿಗೆ ಮೈಸೂರು ಸೇರಿದಂತೆ ಕೆಲವು ಕಡೆಗಳಲ್ಲಿ ಇನ್ನೂ ಮಹಜರು ನಡೆಸಬೇಕಿದ್ದು, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಬೇಕಿದೆ. ಹೀಗಾಗಿ, ಇನ್ನೂ ಪೊಲೀಸ್ ಕಸ್ಟಡಿಗೆ ವಹಿಸುವಂತೆ ಕೋರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post