ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಆರೋಪಿ ನಟ ದರ್ಶನ್’ಗೆ #Actor Darshan ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಇಂದು ಬಿಜಿಎಸ್ ಆಸ್ಪತ್ರೆಯಿಂದ #BGS Hospital ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್’ಗೆ 45 ದಿನಗಳ ಹಿಂದೆ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ದೊರೆತಿತ್ತು. ಆನಂತರ ಬೆನ್ನು ನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.

Also read: ಶಿವಮೊಗ್ಗ | ಮುಪ್ಪಾನೆ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿ: 40 ಪ್ರಯಾಣಿಕರಿಗೆ ಗಾಯ
ದರ್ಶನ್ ಪತ್ನಿ ವಿಜಯಲಕ್ಷ್ಮಿ, #Darshan Wife Vijayalakshmi ನಟ ಧನ್ವೀರ್ ಸೇರಿದಂತೆ ಆಪ್ತರು ಆಸ್ಪತ್ರೆಗೆ ತೆರಳಿ ಅವರನ್ನು ಕರೆದುಕೊಂಡು ಹೊರಟರು. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ತುರ್ತಾಗಿ ಅವರಿಗೆ ಶಸ್ತçಚಿಕಿತ್ಸೆ ಮಾಡಬೇಕಿದೆ. ತಡವಾದರೆ ಅವರು ಪಾರ್ಶ್ವವಾಯುಗೆ ತುತ್ತಾಗಬಹುದು ಎಂದು ಕಾರಣ ನೀಡಿ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ, ಈವರೆಗೂ ಶಸ್ತçಚಿಕಿತ್ಸೆ ಮಾಡಿಸಿಕೊಳ್ಳದೇ, ಕೇವಲ ಫಿಸಿಯೋಥೆರಪಿ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post