ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊಲೆ ಆರೋಪಿ ನಟ ದರ್ಶನ್’ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡುತ್ತಿರುವ ಫೋಟೋ ಹಾಗೂ ವೀಡಿಯೋ ವೈರಲ್ ಆದ ಬೆನ್ನಲ್ಲೇ ಬಾಡಿ ವಾರೆಂಟ್ ಮೂಲಕ ಆತನನ್ನು ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮೂಲಗಳಿಂದ ವರದಿಯಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ದರ್ಶನ್’ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್ #Darshan ಸೇರಿ ನಾಲ್ವರ ಬಾಡಿವಾರೆಂಟ್’ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಸಂಜೆ ಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿರುವ ಪೊಲೀಸರು ಮಂಗಳವಾರವಾದ ಇಂದು ಕೋರ್ಟ್ ಗಮನಕ್ಕೆ ತಂದು ಬಾಡಿವಾರೆಂಟ್’ಗೆ ಪಡೆಯಲು ತಯಾರಿ ನಡೆಸಿದ್ದಾರೆ. ಇಂದು ಸಂಜೆಯೇ ದರ್ಶನ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
Also read: ಬೀದಿಯಲ್ಲಿ ಹೋಗುವವರಿಂದೆಲ್ಲಾ ದೂರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಎಂಪಿ ರಾಘವೇಂದ್ರ ಟಕ್ಕರ್
ಹಿಂಡಲಗಾ ಜೈಲಿಗೆ ದರ್ಶನ್ ಶಿಫ್ಟ್?
ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪಟಾಲಂ ಅನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ದತೆ ನಡೆದಿದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ #Renukaswamy murder ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ.
ದರ್ಶನ್ ಒಬ್ಬನನ್ನು ಮಾತ್ರ ನಟೋರಿಯಸ್ ಖೈದಿಗಳಿರುವ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡುವ ಸಾಧ್ಯತೆಯಿದೆ.
ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವ ಫೋಟೋ ಮತ್ತು ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪರಪ್ಪನ ಅಗ್ರಹಾರದ ಕರಾಳ ಮುಖ ಮತ್ತೊಮ್ಮೆ ಬಯಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ದರ್ಶನ್ ಹಾಗೂ ಗ್ಯಾಂಗ್’ಗೆ ಸಂಕಷ್ಟ ಫಿಕ್ಸ್ ಆಗಿದೆ. ಹಿಂಡಲಗಾ ಜೈಲಿನ `ಅಂಧೇರಿ’ ಸೆಲ್’ಗಳಿಗೆ ಈ ಗ್ಯಾಂಗ್ ಶಿಫ್ಟ್ ಆಗುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post