ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ದಾಖಲೆ ಬರೆದಿದ್ದ, ಚಿತ್ರನಟರೂ ಆಗಿದ್ದ ಕೆ.ಶಿವರಾಮ್ K Shivaram ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೋದಿ ರಸ್ತೆಯಲ್ಲಿರುವ ಶಿವರಾಮ್ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯನ್ನು ಕನ್ನಡದಲ್ಲೇ ಬರೆದು ಆಯ್ಕೆಯಾದ ಮೊದಲ ಐಎಎಸ್ ಅಧಿಕಾರಿ ಎಂಬ ಕೀರ್ತಿಗೆ ಶಿವರಾಮ್ ಪಾತ್ರರಾಗಿದ್ದರು.
ಸೇವೆಗೆ ಆಯ್ಕೆಯಾದ ನಂತರ ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಕಡೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು.
Also read: ಶಿಕಾರಿಪುರ | ಗ್ರಾಮೀಣರಿಗೆ ಗುಡ್ ನ್ಯೂಸ್ | ಐದು ಕೆಎಸ್’ಆರ್’ಟಿಸಿ ನೂತನ ಬಸ್’ಗೆ ಚಾಲನೆ
ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಶಿವರಾಮ್ ಅವರು ರಾಜಕೀಯ ಪ್ರವೇಶಿಸಿದ್ದರು.
ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲು ಕಂಡಿದ್ದರು. ಬಳಿಕ, ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದರು.
ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post