ಕಲ್ಪ ಮೀಡಿಯಾ ಹೌಸ್
ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ನಗರದ ಹೊರವಲಯದ ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಅಪಘಾತ ಸಂಭವಿಸಿದ್ದು, ಜಗ್ಗೇಶ್ ಅವರ ಹೆಸರಿನಲ್ಲಿ ನೋಂದಣಿಯಾಗಿದ್ದ ಕಾರಿನಲ್ಲಿ ಗುರುರಾಜ್ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬಿಎಂಡಬ್ಲ್ಯೂ ಕಾರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಏರ್ ಬ್ಯಾಗ್ ಓಪನ್ ಆಗಿದ್ದ ಪರಿಣಾಮ ಗುರುರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.










Discussion about this post