ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ಮುಂಜಾನೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಕನ್ನಡದ ಚಿತ್ರರಂಗದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ.
ಇಂದು ಮುಂಜಾನೆ ಜಿಮ್’ನಲ್ಲಿ ಕಸರತ್ತು ನಡೆಸುತ್ತಿರುವ ವೇಳೆ ತೀವ್ರ ಹೃದಯಾಘಾತಕ್ಕೊಳಗಾದ ಅವರನ್ನು ತತಕ್ಷಣವೇ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಭಜರಂಗಿ 2 ಚಿತ್ರ ವೀಕ್ಷಿಸುತ್ತಿದ್ದ ಶಿವರಾಜ್ ಕುಮಾರ್ ಕುಟುಂಬಸ್ಥರು ಹಾಗೂ ಡಾ.ರಾಜ್ ಕುಟುಂಬಸ್ಥರು ವಿಷಯ ತಿಳಿದಾಕ್ಷಣ ಅರ್ಧಕ್ಕೆ ನಿಲ್ಲಿಸಿ ಆಸ್ಪತ್ರೆಗೆ ದೌಡಾಯಿದ್ದರು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಖ್ಯಾತ ನಟರಾದ ರವಿಚಂದ್ರನ್, ಯಶ್ ಸೇರಿದಂತೆ ಚಿತ್ರರಂಗದ ಗಣ್ಯಾತಿಗಣ್ಯರು ಭೇಟಿ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post