ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲ ಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ’ವನ್ನು ಆಯೋಜಿಸಲಾಗಿದ್ದು, ನಟಿ ರಕ್ಷಿಕಾ ಶೆಟ್ಟಿ ಚಾಲನೆ ನೀಡಿದರು.
ಜನವರಿ 2 ರವರೆಗೆ ಮೇಳ:
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ.
ಮೇಳಕ್ಕೆ ಚಾಲನೆ ನೀಡಿದ ಚಿತ್ರನಟಿ ಹಾಗೂ ಮಾಡೆಲ್ ರಕ್ಷಿಕಾ ಶೆಟ್ಟಿ ಮಾತನಾಡಿ, ‘ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಕರಕುಶಲ ಮೇಳ ನಡೆಯುತ್ತಿದೆ. ಶುಕ್ರವಾರದಿಂದ ಆಮಭವಾಗಿರುವ ಈ ಮೇಳ ಜನವರಿ 2 ರವರೆಗೆ ನಡೆಯುತ್ತದೆ. ಈ ಮೇಳದಲ್ಲಿ ಕೈನಲ್ಲೇ ತಯಾರಿಸಿದ ಆಕರ್ಷಕ ವಸ್ತುಗಳು, ನಾನಾ ವಿನ್ಯಾಸದ ಸೀರೆಗಳು, ಬಗೆ ಬಗೆಯ ಆಭರಣಗಳು ಸೆಳೆಯುತ್ತಿವೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಕ್ಕೆ ಈ ಮೇಳ ವಿಶೇಷವಾಗಿದೆ. ಹೆಚ್ಚಿನ ಜನ ಮೇಳಕ್ಕೆ ಬಂದು ಹ್ಯಾಂಡ್ ಮೇಡ್ ವಸ್ತುಗಳನ್ನು ಖರೀದಿಸುವ ಮೂಲಕ ಕುಶಲಕರ್ಮಿಗಳಿಗೆ ನೆರವಾಗೋಣ’ ಎಂದರು.
ಕರೋನಾ ಲಾಕ್‌ಡೌನ್ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರ ಶಾಪಿಂಗ್ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸೆಲಬ್ರೇಷನ್ ಗಾಗಿ ಬೇಕಾಗಿರುವ ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post