ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಸೂಚಿಸಿದರು.
ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಗೃಹ ಕಚೇರಿ ಮಾತನಾಡಿದರು.
ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ವರೆಗೆ ಒಟ್ಟು 7274 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವ್ಯವಹಾರ (Transaction) ನಡೆದಿದ್ದು, ಜೂನ್ ತಿಂಗಳಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

Also read: ಪ್ರಧಾನಿ ಮೋದಿಯವರ ರಕ್ಷಣಾ ತಂಡ ಸೇರಿದೆ ರಾಜ್ಯದ ಮುಧೋಳ ನಾಯಿಗಳು
ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ಪಿಎಂ ಗತಿಶಕ್ತಿ ಯೋಜನೆಯಡಿ ರಾಜ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಮಗ್ರ ಕುಂದು ಕೊರತೆ ನಿವಾರಣಾ ವ್ಯವಸ್ಥೆಯಡಿ ದೂರುದಾರರಿಗೆ ತೃಪ್ತಿಕರ ಸೇವೆಯನ್ನು ಒದಗಿಸಲು ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.
ಇ-ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ. ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು ಎಂದು ಮುಖ್ಯಮಂತ್ರಿಗಳು ನುಡಿದರು.

ಡಿಬಿಟಿ ವೇದಿಕೆಯನ್ನು ಇನ್ನಷ್ಟು ಬಲಪಡಿಸಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಧ್ಯವಿರುವ ಎಲ್ಲ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಹಾಗೂ ಇ-ಆಡಳಿತ ಇಲಾಖೆ ಕಾರ್ಯದರ್ಶಿ ವಿ.ಪೊನ್ನುರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	



 Loading ...
 Loading ... 
							



 
                
Discussion about this post