ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ BMTC 100 ವಿದ್ಯುತ್ ಚಾಲಿತ ಬಸ್’ಗಳು ಸೇರ್ಪಡೆಗೊಂಡಿದ್ದು, ಇವುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಇಂದು ಚಾಲನೆ ನೀಡಿದರು.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್’ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು.
ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿಯಲ್ಲಿ ಪ್ರಯಾಣ ಮಾಡ್ತಾರೆ. ಇದರಲ್ಲಿ ಎಲ್ಲ ಜಾತಿ, ಧರ್ಮ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.
ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದರು.
Also read: ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು | ಎಲ್ಲೆಲ್ಲಿ ನಿಲುಗಡೆ?
ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, DCMDKShivakumar ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post