ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
“ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ Minister Krishna Byregowda ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ “ಸಕಾಲ” Sakala ಸಭೆ ನಡೆಸಿ ಮಾತನಾಡಿದ ಅವರು, “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೇ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಆದರೆ, ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್ ನಲ್ಲಿದ್ದು, ಮುಂದಿನ 8 ತಿಂಗಳೊಳಗಾಗಿ ಎಲ್ಲಾ ಸೇವೆಗಳನ್ನೂ ಡಿಜಿಟಲೀಕರಿಸಬೇಕು ಎಂದು ಅಧಿಕಾರಿಗಳಿಗೆ ಸಮಯದ ಗಡುವು ನೀಡಿದರು.

Also read: ವನ್ಯಜೀವಿಗಳ ಸಂರಕ್ಷಣೆ ನಮ್ಮೆಲರ ಹೊಣೆ: ಪ್ರೊ ವೆಂಕಟೇಶ್
ಹೀಗಾಗಿ ಅರ್ಜಿಯಿಂದ ಸೇವೆಯ ವರೆಗೆ ಎಲ್ಲವೂ ಡಿಜಿಟಲೀಕಣಗೊಳಿಸಬೇಕು. ಎಲ್ಲವೂ ಆನ್ಲೈನ್ನಲ್ಲಿ ದಾಖಲಾಗಬೇಕು. ಅಲ್ಲದೆ, ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್ನೊಂದಿಗೆ ಸಂಯೋಜಿಸಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಸಕಾಲ ನಿರ್ದೇಶಕರಾದ ಉಜ್ವಲ್ ಕುಮಾರ್ ಘೋಷ್ ಹಾಗೂ ಸಕಾಲ ಉಪ ನಿರ್ದೇಶಕರಾದ ಪಲ್ಲವಿ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post