ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇರಳದಲ್ಲಿ ಕೊರೋನಾ Corona ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ದೇಶದಲ್ಲಿ ಮತ್ತೊಂದು ಅಲೆ ಅಪ್ಪಳಿಸುತ್ತಾ ಎಂಬ ಆತಂಕದ ನಡುವೆಯೇ ಕರ್ನಾಟಕದಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ಹಾಗೂ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಈ ನಡುವೆಯೇ ಮಹತ್ವದ ಹೆಜ್ಜೆಯಿಟ್ಟಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಏನಿದೆ ಮಾರ್ಗಸೂಚಿಯಲ್ಲಿ?
- 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರು ಜನಸಂದಣಿಯಿರುವ ಪ್ರದೇಶಕ್ಕೆ ತೆರಳಬೇಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ
ಕಿಡ್ನಿ, ಹೃದಯ, ಲಿವರ್ ಸೇರಿದಂತೆ ವಿವಿಧ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಿ. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ - ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು
Also read: ಕೇರಳದಲ್ಲಿ ಕೊರೋನಾ ರೂಪಾಂತರಿ ಪತ್ತೆ ಹಿನ್ನೆಲೆ: ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಿ
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರಿ. ಇತರೆ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು,
- ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡಿ
- ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪುದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸಿ
- ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿರಿ
- ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post