ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೃಷಿ ಸಚಿವ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಿರೇಕೆರೂರಿನ ತಮ್ಮ ಸ್ವಗೃಹದಲ್ಲಿ ಸರ್ಕಾರಿ ವೈದ್ಯರಿಂದ ಕೊರೋನಾ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಬಿ.ಸಿ.ಪಾಟೀಲ್ ಮಾತನಾಡಿ, ಕೊರೋನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ರಾಜ್ಯ ಸರ್ಕಾರ ಜನರ ಸುರಕ್ಷತೆಯಿಂದ ಕೊರೊನಾ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರಮೋದಿ ಕೊರೋನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.
Took the #COVID19Vaccine with my wife, at my Hirekerur house from the Govt. doctors today.
While 'Made In India' vaccines are being immensely appreciated by many countries, some vested interest groups are spreading false information about the vaccines.@DDChandanaNews | @DHFWKA pic.twitter.com/yE6fYZTddJ
— Kourava B.C.Patil (@bcpatilkourava) March 2, 2021
ನಮ್ಮ ಭಾರತದಲ್ಲಿಯೇ ತಯಾರಿಸಿದ ಕೊರೋನಾ ಲಸಿಕೆಗೆ ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ. ಕೊರೋನಾ ಸಂಘರ್ಷದ ಸಮಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ನಿರ್ಭೀತಿಯಿಂದ ಕೊರೋನಾ ಲಸಿಕೆ ಪಡೆಯಬೇಕು ಎಂದು ಬಿ.ಸಿ. ಪಾಟೀಲ್ ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post