ಕಲ್ಪ ಮೀಡಿಯಾ ಹೌಸ್
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post