ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವಾಗಿರುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 3ರವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ನ.30ರಿಂದ ಡಿ.3ರವರೆಗೆ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















