ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಆರ್ ಪೇಟೆಯ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳ Kumbamela ಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, 16 ರಂದು ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಮತ್ತು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ Minister Gopalaiah ಅವರು ಜಂಟಿ ಸುದ್ದಿಗೋಷ್ಟಿ ನಡೆಸಿ ಮಹಾಕುಂಭಮೇಳದ ಕುರಿತು ಮಾಹಿತಿ ನೀಡಿದರು.
ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು, ಹಲವು ಸಾಧು ಸಂತರು ಸೇರಿದಂತೆ 6 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ ನೀಡುವ ಸಾಧ್ಯತೆ ಇದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸ್ವಾಮೀಜಿಗಳಿಗೆ, ಸಾಧು ಸಂತರಿಗೆ, VVIPಗಳಿಗೆ, ಭಕ್ತರಿಗೆ ಪ್ರತ್ಯೇಕ ಸ್ನಾನಘಟ್ಟ ನಿರ್ಮಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ನೀಡಿದರು.
ಬರುವ ಜನರಿಗೆ ನಾಲ್ಕು ದಿನಗಳ ಕಾಲ ನಿರಂತರವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. 200 ಕ್ಕೂ ಹೆಚ್ಚು ಬಯೋ ಟಾಯ್ಲೆಟ್ ವ್ಯವಸ್ಥೆ, 200 ಸಾಧುಗಳ ವಾಸ್ತವ್ಯಕ್ಕೆ ಟೆಂಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಹಲವು ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
Also read: ಅವಧಿಗೆ ಮೊದಲೇ ಅದ್ಬುತ ಸಾಧನೆ: ಧಾರವಾಡ ಜಿಲ್ಲೆಗೆ ಮೂರನೆಯ ಸ್ಥಾನದ ಗರಿ
14 ರಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಂದ ಉದ್ಘಾಟನೆ, 16 ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಆಳ್ವಾಸ್, ಆದಿಚುಂಚನಗಿರಿ ಹಾಗೂ ಸುತ್ತೂರು ಸಂಸ್ಥೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post