ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸುತ್ತಾ, ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.
ಸುಳ್ಳಿನ ಕಂತೆ
ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.
Also read: ಈತ ಹಗಲು ಪೊಲೀಸಪ್ಪ, ರಾತ್ರಿಯಾದರೆ ಕಳ್ಳನಪ್ಪ | ಈತನ ಟಾರ್ಗೆಟ್ ಯಾರು ಗೊತ್ತಾ
ಬಿಜೆಪಿಯ ದಿವಾಳಿತನ
ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು PM Modi ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪಹಾರ ಸಭೆ
ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದರು.
ಹೈಕಮಾಂಡ್ ನಿರ್ಧಾರ
ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post