ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಂಚರಾಜ್ಯ ಚುನಾವಣೆಯ ಯಶಸ್ಸಿನ ನಂತರ ಎಪ್ರಿಲ್ 1ರಂದು ಬಿಜೆಪಿಯ ಚಾಣಕ್ಯ ಅಮಿತ್ ಶಾ Amith Shah ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಕಮಲ ಪಾಳಯದಲ್ಲಿ ಭಾರೀ ಬಿರುಸಿನ ಕಾರ್ಯಗಳು ನಡೆಯುತ್ತಿವೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಹರಿದಾಡುತ್ತಿರುವ ಬೆನ್ನಲ್ಲೇ ಅಮಿತ್ ಶಾ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಸಂಪುಟ ವಿಸ್ತರಣೆ ಕುರಿತಾಗಿ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆ ವಿಚಾರದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಭವಿಷ್ಯದ ದೃಷ್ಠಿಯಿಂದ ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗಿದೆ.
Also read: ತಾಳಗುಪ್ಪ ಗ್ರಾಮ ಪಂಚಾಯಿತಿ ಬೀಗ ಒಡೆದು ಕಳ್ಳತನ: ಚುರುಕುಗೊಂಡ ತನಿಖೆ
ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ೨೦೨೪ರ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದ್ದು, ಈ ಬಾರಿಯ ವಿಸ್ತರಣೆ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ಗಮನ ಹರಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post