ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು.
ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ.

ಸಿಎಂ ಸಿದ್ಧರಾಮಯ್ಯ ಸಂತಾಪ
ದೇಶ ಸೇವೆಗಾಗಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದು, ಹುತಾತ್ಮ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post