No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2022
in ಬೆಂಗಳೂರು ನಗರ
0
ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ ಕುಮಾರ್‌ Anantha Kumar ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6ರಂದು ಬೆಳಿಗ್ಗೆ 10.30ಕ್ಕೆ ಲೋಕಾರ್ಪಣೆಗೊಳ್ಳಲಿದ್ದು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ  ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ Tejaswi Ananthakumar ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಡಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವ ಶಕ್ತಿಗಳಿಗೆ ದಾರಿದೀಪವಾಗಲೆಂಬ ಸದುದ್ದೇಶದಿಂದ ಸೌತ್‌ ಎಂಡ್‌ ವೃತ್ತದಲ್ಲಿ ಈ ಹಿಂದೆ ಇದ್ದ ಅನಂತಕುಮಾರ್‌ ಅವರ ಕಚೇರಿಯನ್ನು “ಅನಂತ ಪ್ರೇರಣಾ ಕೇಂದ್ರ” ವನ್ನಾಗಿಸಲಾಗಿದೆ. ಅನಂತಕುಮಾರರ ಬದುಕಿನ ಸಾರ್ಥಕತೆಯನ್ನು ಅರಿತವರಿಗೂ, ನಾಯಕತ್ವದ ಬೆಳವಣಿಗೆಯ ರೂಪರೇಷೆಯನ್ನು ಗುರುತಿಸಲೆಳಸುವವರಿಗೂ, ನಾಡ ಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವಶಕ್ತಿಗಳಿಗೂ ದಾರಿದೀಪವಾಗಲೆಂಬ ಮಹದುದ್ದೇಶದಿಂದ ಅನಂತಕುಮಾರರ ಜೀವನ, ವ್ಯಕ್ತಿತ್ವ, ಸಾಧನೆಗಳನ್ನು ಪರಿಚಯಿಸುವ ಮಾಹಿತಿಕೇಂದ್ರವೊಂದನ್ನು ತೆರೆಯಲಾಗಿದೆ. ಅನಂತಕುಮಾರರ ಆಶೋತ್ತರಗಳನ್ನು ಮುಂದುವರಿಸಿ ನಿರ್ವಹಿಸುವ ಹೊಣೆಹೊತ್ತ ಅದಮ್ಯಚೇತನ ಸಂಸ್ಥೆಯ ಸಹಯೋಗದಲ್ಲಿ ಈ ಕೇಂದ್ರವು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಅನಂತ ಪ್ರೇರಣಾ ಕೇಂದ್ರ ಒಳಗೊಂಡಿರುವ ಅಂಶಗಳು:
ಛಾಯಾಚಿತ್ರ ಪ್ರದರ್ಶಿನಿ: ಈ ಪ್ರೇರಣಾ ಕೇಂದ್ರದಲ್ಲಿ ಅನಂತಕುಮಾರ್‌ ಅವರ ಬಾಲ್ಯದಿಂದ ಮೊದಲುಗೊಂಡು ಎಬಿವಿಪಿ ಕಾರ್ಯಕರ್ತರಾಗಿ ಅವರು ಗಳಿಸಿಕೊಂಡ ಅನುಭವ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಬೆಳೆಯಲು ಅವರು ದುಡಿದ ಪರಿ, ಆರು ಬಾರಿ ಸಂಸದರಾಗಿ, ಕೇಂದ್ರದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಅನಂತಕುಮಾರ್‌ ಸಾಧಿಸಿದ ಕಾರ್ಯಗಳು, ಅಚ್ಚರಿ ಮೂಡಿಸುವಂತೆ ಅವರು ನಾಯಕತ್ವದ ಸೋಪಾನಗಳನ್ನು ಏರಿ ನಿಂತ ರೀತಿ ಎಲ್ಲವನ್ನೂ ಛಾಯಾಚಿತ್ರಗಳ ಮೂಲಕ ಪ್ರದರ್ಶನದ ಮೂಲಕ ಪರಿಚಯಿಸಲಾಗುತ್ತಿದೆ. ಈ ಚಿತ್ರಗಳನ್ನು ಸವಿವರ ಅರ್ಥಮಾಡಿಕೊಳ್ಳಲು ಧ್ವನಿರೂಪದ ವ್ಯಾಖ್ಯಾನವುಳ್ಳ ಮೊಬೈಲ್ ಆಪ್ ಸೌಕರ್ಯವನ್ನೂ ವ್ಯವಸ್ಥೆಮಾಡಲಾಗುತ್ತಿದೆ.

ಗ್ರಂಥಭಂಡಾರ ಮತ್ತು ವಾಚನಾಲಯ:
ಅನಂತಪ್ರೇರಣಾ ಕೇಂದ್ರದ ಒಂದು ಭಾಗದಲ್ಲಿ ಸುಸಜ್ಜಿತ ಗ್ರಂಥಭಂಡಾರ ಮತ್ತು ಉಚಿತ ವಾಚನಾಲಯವನ್ನು ವ್ಯವಸ್ಥೆಮಾಡಲಾಗಿದೆ. ಸಾರ್ವಜನಿಕರೂ ವಿದ್ಯಾರ್ಥಿಗಳೂ ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು. ಇಲ್ಲಿ ಅನಂತಕುಮಾರರ ಸ್ವಂತ ಸಂಗ್ರಹದಿಂದಲೂ ಇತರ ಮೂಲಗಳಿಂದಲೂ ಸಂಗ್ರಹಿಸಿದ ಉಪಯುಕ್ತ ಪುಸ್ತಕಗಳನ್ನು ಇಲ್ಲಿಯೇ ಉಚಿತವಾಗಿ ಅಧ್ಯಯನ ಮಾಡಲು ಅವಕಾಶವಿದೆ. ಮುಂದೆ, ಉದ್ಯೋಗಾಪೇಕ್ಷಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರತ್ಯೇಕ ವಿಭಾಗವನ್ನು ತೆರೆಯುವ ಉದ್ದೇಶವೂ ಇದೆ.

ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ:
ಸೌತ್ ಎಂಡ್ ವೃತ್ತದ ಪರಿಸರದಲ್ಲಿ ಅನೇಕ ಶಿಕ್ಷಣಸಂಸ್ಥೆಗಳಿದ್ದು ದೂರದೂರದಿಂದ ಇಲ್ಲಿಗೆ ಪ್ರತಿನಿತ್ಯ ಅನೇಕ ವಿದ್ಯಾರ್ಥಿಗಳು ಬರುತ್ತಾರೆ. ಇವರಲ್ಲಿ ಅನೇಕರಿಗೆ ಮಧ್ಯಾಹ್ನದ ಊಟಕ್ಕೆ ಬೇಕಾದ ಅನುಕೂಲವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅದಮ್ಯ ಚೇತನದ ಸಹಯೋಗದೊಡನೆ ಪ್ರತಿನಿತ್ಯ ಮಧ್ಯಾಹ್ನದ ಭೋಜನವನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರೇರಣಾಕೇಂದ್ರದ ಮೇಲುಮಹಡಿಯ ಆವರಣದಲ್ಲಿ ಊಟದ ವಿತರಣೆಗಾಗಿ ಸೂಕ್ತವ್ಯವಸ್ಥೆ ಕಲ್ಪಿಸಲಾಗಿದೆ.

Also read: ಅಮೃತ ನಗರೋತ್ಥಾನ: 1519.43 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಗಿಡ ವಿತರಣೆ:
ಸಸ್ಯಾಗ್ರಹ ಎಂಬ ಪರಿಕಲ್ಪನೆಯನ್ನು ಮುಂದಿಟ್ಟು ಅನಂತಕುಮಾರ್ ಬೆಂಗಳೂರು ಹಸಿರು ಪರಿಸರದ ಸ್ವಚ್ಛ ನಗರವಾಗಬೇಕೆಂಬ ಕನಸು ಕಂಡಿದ್ದವರು. ಅವರು ಪ್ರಾರಂಭಿಸಿದ ಹಸಿರು ಭಾನುವಾರ ಎಂಬ ಗಿಡ ನೆಡುವ ಕಾರ್ಯಕ್ರಮ 350 ಕ್ಕೂ ಹೆಚ್ಚು ವಾರಗಳಿಂದ ನಿರಂತರವಾಗಿ ನಡೆದುಬರುತ್ತಿದೆ. ತಮ್ಮ ಆವರಣದಲ್ಲಿ ಗಿಡ ನೆಟ್ಟು ಬೆಳೆಸಲು ಆಸಕ್ತಿಯುಳ್ಳ ಸಾರ್ವಜನಿಕರಿಗೆ ಗಿಡಗಳನ್ನು ಉಚಿತವಾಗಿ ವಿತರಿಸಲು ಪ್ರೇರಣಾ ಕೇಂದ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ಲೇಟ್ ಬ್ಯಾಂಕ್:
ಹಸಿರು ಜೀವನ ಶೈಲಿಯ ಪ್ರತಿಪಾದಕರಾದ ಅನಂತಕುಮಾರ್ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಖರೀದಿಯನ್ನು ವಿರೋಧಿಸಿ, ಮರುಬಳಸಬಹುದಾದ ಸ್ಟೀಲ್ ಲೋಟ ತಟ್ಟೆ ಚಮಚಗಳ ಬಳಕೆಗೆ ಪ್ರೇರಣೆ ನೀಡಿದ ಫಲವಾಗಿ ಅದಮ್ಯ ಚೇತನದಲ್ಲಿ ಪ್ಲೇಟ್ ಬ್ಯಾಂಕ್ ಯೋಜನೆ ಪ್ರಾರಂಭವಾಗಿದೆ. ಸಾರ್ವಜನಿಕರು ತಾವು ಏರ್ಪಡಿಸುವ ಸಮಾರಂಭಗಳಲ್ಲಿ ಬಳಕೆಗೆ ಇಲ್ಲಿಂದ ಲೋಟ ತಟ್ಟೆಗಳನ್ನು ಉಚಿತವಾಗಿ ಒಯ್ದು ಉಪಯೋಗಿಸಿ ಹಿಂತಿರುಗಿಸಬಹುದಾದ ಷರತ್ತುಬದ್ಧ ಯೋಜನೆ ಇದಾಗಿದೆ. ಪ್ಲೇಟ್ ಬ್ಯಾಂಕಿನ ಒಂದು ಶಾಖೆಯನ್ನು ಪ್ರೇರಣಾ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ.

ಸಂಸ್ಕೃತಿ-ಪರಂಪರೆ ಪ್ರಸಾರ:
ಭಾರತೀಯ ಪರಂಪರೆ, ಸಂಸ್ಕೃತಿ, ಕಲೆ ಮೊದಲಾದವುಗಳ ಬಗ್ಗೆ ಅಪಾರ ಆಸಕ್ತಿಯುಳ್ಳವರಾಗಿದ್ದ ಅನಂತಕುಮಾರರ ಆಶಯಕ್ಕನುಗುಣವಾಗಿ ಈ ಪ್ರೇರಣಾ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂಸ್ಕೃತಿ ಘಟಕವೊಂದನ್ನು ಪ್ರಾರಂಭಿಸಲು ಯೋಚಿಸಲಾಗುತ್ತಿದೆ. ಈ ಘಟಕವು ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

ದೇಶೀಯ ಪರಿಸರಸ್ನೇಹಿ ವಸ್ತುಬಳಕೆಗೆ ಪ್ರೋತ್ಸಾಹ:
ದೇಶೀಯವೂ ಪರಿಸರಕ್ಕೆ ಪೂರಕವೂ ಮರುಬಳಕೆಗೆ ಅವಕಾಶವೂ ಇರುವಂತಹ ಕಚ್ಚಾವಸ್ತುಗಳಿಂದ ತಯಾರಾದ ಬಟ್ಟೆ ಚೀಲಗಳು ಮತ್ತಿತರ ದಿನನಿತ್ಯದ ಬಳಕೆಯ ಸಾಮಗ್ರಿಗಳ ತಯಾರಿಕೆ ಮತ್ತು ಖರೀದಿಯನ್ನು ಪ್ರೋತ್ಸಾಹಿಸಲು ಅನಂತಪ್ರೇರಣಾಕೇಂದ್ರದ ಆವರಣದಲ್ಲಿ ವಾರಕ್ಕೊಮ್ಮೆ ಅಂತಹ ವಸ್ತುಗಳ ಮಾರಾಟಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Anantha KumarBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState NewsTejaswi Ananthakumarಅನಂತ ಕುಮಾರ್ತೇಜಸ್ವಿನಿ ಅನಂತಕುಮಾರ್‌ಬೆಂಗಳೂರು
Share198Tweet123Send
Previous Post

ಅಮೃತ ನಗರೋತ್ಥಾನ: 1519.43 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ

Next Post

ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL