ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಗೆ ಮೂರು-ನಾಲ್ಕು ತಿಂಗಳು ಇರುವಂತೆಯೇ ಜೆಡಿಎಸ್ ತನ್ನ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, H D Kumaraswamy ಹೋದೆಡೆಯಲ್ಲೆಲ್ಲಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಂತೆ ಕೋರುತ್ತಿದ್ದರು. ಇದಾಗಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದಿದ್ದಾರೆ.
ಶಿವಮೊಗ್ಗ ಜಿಲ್ಲೆ ಮೂರು ಕ್ಷೇತ್ರಕ್ಕೆ ಹೆಸರು ಘೋಷಣೆ:
ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಜೆಡಿಎಸ್ ಘೋಷಣೆ ಮಾಡಿರುವುದು ಜಿಲ್ಲೆಯಲ್ಲಿ ಚುನಾವಣಾ ಚಟುವಟಿಕೆಗಳಿಗೆ ಪಕ್ಷ ಚಾಲನೆ ನೀಡಿದಂತಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಶಾಸಕಿ ಶಾರದಾ ಪೂರ್‍ಯ ನಾಯ್ಕ್, ಭದ್ರಾವತಿಯಿಂದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪತ್ನಿ ಶಾರದಾ ಅಪ್ಪಾಜಿಗೌಡ ಹಾಗೂ ತೀರ್ಥಹಳ್ಳಿ ಕ್ಷೇತ್ರದಿಂದ ರಾಜಾರಾಮ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಭದ್ರಾವತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಪ್ಪಾಜಿಗೌಡರ ಪ್ರಥಮ ಪ್ರಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಶಾರದಾ ಅಪ್ಪಾಜಿ ಅವರ ಹೆಸರನ್ನು ಅಂದೇ ಘೋಷಣೆ ಮಾಡಿದ್ದರು. ಅಂದಿನಿಂದಲೂ ಶಾರದಾ ಅಪ್ಪಾಜಿ ಕ್ಷೇತ್ರದಾದ್ಯಂತ ಪ್ರವಾಸ ಕೈಗೊಳ್ಳುತ್ತಾ ಪ್ರಚಾರ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post