ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವರ್ ಸ್ಟಾರ್ ಪುನೀತ್ ರಾಜಕುಮಾರ್ Power star Puneeth Rajkumar ಅವರ ಜನ್ಮದಿನದ ಇಂದೇ ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ James ಚಿತ್ರ ಬಿಡುಗಡೆಗೊಂಡು ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ.
ಪುನೀತ್ ರಾಜಕುಮಾರ್ ಅವರ ಕನಸಿನ ಗಂಧದಗುಡಿ Gandhada Gudi ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ಪಿಆರ್’ಕೆ ಪ್ರೊಡಕ್ಷನ್ಸ್ PRK Production ಇಂದು ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಒಂದೆಡೆ ಪುನೀತ್ ಇಲ್ಲದಿದ್ದರೂ ಅವರ ಜನ್ಮದಿನವನ್ನು ಅಭಿಮಾನಿಗಳು ನೋವು ತುಂಬಿದ ಭಾವದಿಂದಲೇ ಆಚರಿಸುತ್ತಿದ್ದರೆ, ಇನ್ನೊಂದೆಡೆ ಜೇಮ್ಸ್ ಚಿತ್ರವನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತಿದೆ. ರಾಜ್ಯ ದೇಶ ಮಾತ್ರವಲ್ಲ ವಿದೇಶದಲ್ಲೂ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನಗೊಳ್ಳುತ್ತಿದೆ. ಬೆಂಗಳೂರು ಒಂದರಲ್ಲೇ ಸುಮಾರು 800ಕ್ಕೂ ಅಧಿಕ ಸ್ಕ್ರೀನ್’ನಲ್ಲಿ ಜೇಮ್ಸ್ ಅಬ್ಬರಿಸುತ್ತಿದೆ.
ಈ ನಡುವೆಯೇ, ಪಿಆರ್’ಕೆ ಪ್ರೊಡಕ್ಷನ್ಸ್ ಗಂಧದಗುಡಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ.
Also read: ಪ್ರತಿಯೊಂದು ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡುವ ಶಕ್ತಿ ಮಹಿಳೆಗಿದೆ : ಡಾ. ಉಮಾ
ನದಿ, ಅರಣ್ಯ ಸೇರಿದಂತೆ ಪ್ರಾಕೃತಿಕ ಸೊಬಗಿನ ನಡುವೆ ಪುನೀತ್ ರಾಜಕುಮಾರ್ ನಡೆದುಕೊಂಡು ಬರುತ್ತಿರುವ ಅದ್ಬುತ ಲುಕ್ ಪೋಸ್ಟರ್’ನಲ್ಲಿದ್ದು, ಅಪ್ಪು ಸ್ಟ್ರೈಲ್’ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದ ಪುನೀತ್ ರಾಜ್ಕುಮಾರ್ ವಿಶೇಷ ಆಸಕ್ತಿ ವಹಿಸಿ ಗಂಧದ ಗುಡಿಯನ್ನು ನಿರ್ಮಿಸಿದ್ದಾರೆ. ವಿಶೇಷವೆಂದರೆ ಟೀಸರ್ನಲ್ಲಿ ಇರುವಂತೆ ಈ ಚಿತ್ರದಲ್ಲಿ ಪುನೀತ್ ಸ್ವತಃ ಕೂಬಾ ಡೈವಿಂಗ್ ಮಾಡಿದ್ದಾರೆ. ಒಂದು ನಿಮಿಷ ಇರುವ ಈ ಟೀಸರ್ ಅದ್ಭುತವಾಗಿ ಮೂಡಿಬಂದಿದ್ದು, ಒಟ್ಟಾರೆ ಈ ಚಿತ್ರ ಸತ್ಯ ಘಟನೆಗಳನ್ನು ಒಳಗೊಂಡಿದೆ. ಹಾಗೂ ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳನ್ನು ಇದರಲ್ಲಿ ವಿಭಿನ್ನವಾಗಿ ತೋರಿಸುವ ಮೂಲಕ ಈ ಭಾಗದ ಪ್ರಾಕೃತಿಕ ವೈಭವವನ್ನು ಸೆರೆಹಿಡಿಯಲಾಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಪಿಆರ್ಕೆ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಿದ್ದು, ಅಮೋಘವರ್ಷ ಇದನ್ನು ನಿರ್ದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post