ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ #Actor Darshan ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದ್ದು, ಬೇರೊಂದು ಪ್ರಕರಣದಲ್ಲಿ ಎಫ್’ಐಆರ್ ದಾಖಲಾಗಿದೆ.
ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರಂ ಹೌಸ್’ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ ಎಂಬ ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕಿದ ಆರೋಪದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಎಫ್’ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾಹಿತಿ ತಿಳಿದುಬಂದಿದ್ದು, ಪ್ರಕರಣ ಕುರಿತಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ, #Vijayalakshmi ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್’ಐಆರ್ ದಾಖಲಾಗಿದೆ ಎಂದು ಹೇಳಲಾಗಿದೆ.
Also read: ಹೊಸ ಇತಿಹಾಸ ಸೃಷ್ಟಿಸಿದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಸಂಪನ್ನ
ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್’ಐಆರ್ ದಾಖಲಿಸಲಾಗಿದ್ದು, ಅಗತ್ಯವಿರುವ ಸೆಕ್ಷನ್’ಗಳ ಅಡಿಯಲ್ಲಿ ಐದು ನೋಟಿಸ್’ಗಳನ್ನು ಜಾರಿ ಮಾಡಲಾಗಿದೆ., ಆದರೆ ಇದೂವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಕರಣ ಕುರಿತಂತೆ ಇಲಾಖೆಯಾಗಲೀ, ಅಧಿಕಾರಿಗಳಾಗಲೀ ಯಾವುದೇ ರೀತಿಯಲ್ಲಿ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ. ಇತ್ತೀಚೆಗಷ್ಟೇ ಹುಲಿ ಉಗುರು ಪ್ರಕರಣದಲ್ಲಿಯೂ ದರ್ಶನ್ ಅವರ ಹೆಸರು ವಿವಾದದ ಸುದ್ಧಿಯಲ್ಲಿತ್ತು. ಬೆಂಗಳೂರು ವೃತ್ತದ ಅಧಿಕಾರಿಗಳು ದರ್ಶನ್ ಅವರಿಗೆ ನೋಟಿಸ್ ನೀಡಿ ಅವರ ಮನೆಯನ್ನು ಪರಿಶೀಲಿಸಿದ್ದರು. ಈ ವೇಳೆ 8 ಹುಲಿ ಉಗುರಿನ ಪೆಂಡೆಂಟ್ ದರ್ಶನ್ ಮನೆಯಲ್ಲಿ ಸಿಕ್ಕಿದ್ದವು. ಆದರೆ, ಅದೆಲ್ಲ ಅಸಲಿ ಹುಲಿ ಉಗುರು ಅಲ್ಲ ಎನ್ನುವುದಾಗಿ ಆನಂತರ ತಿಳಿದುಬಂದಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post