ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಂದ್ರಯಾನ – 3 ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೆ ಮತ್ತೊಂದು ವಿಶಿಷ್ಟ ಮೈಲುಗಲ್ಲನ್ನು ಇಸ್ರೋ ನೆಟ್ಟಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು Minister Bosraju ಹರ್ಷ ವ್ಯಕ್ತಪಡಿಸಿದರು.
ಚಂದ್ರಯಾನ – 3 ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೆ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ – 1 ಮತ್ತು 2 ರ ಯಶಸ್ವಿ ಕಾರ್ಯಾಚರಣೆ ಗಳಿಂದ ಇಸ್ರೋ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಕನಸನ್ನು ಕಾಣಲು ಅನುವು ಮಾಡಿಕೊಟ್ಟಿದೆ. ಇಂದಿನ ಈ ಯಶಸ್ವಿ ಕಾರ್ಯಾಚರಣೆ ವಿಶ್ವದ ಚಂದ್ರನ ಅನ್ವೇಷಣೆಯ ಕ್ಷೇತ್ರದಲ್ಲಿ ವಿಶೇಷ ಮೈಲುಗಲ್ಲನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿ ಚಂದ್ರನ ಮಣ್ಣಿನ ಮಾದರಿಗಳನ್ನು ಸಮರ್ಥವಾಗಿ ಮರಳಿ ತರುವ ಮೂಲಕ, ಚಂದ್ರನ ಮೇಲ್ಮೈನ ನಮ್ಮ ತಿಳುವಳಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ಅನುವು ಮಾಡಿ ಕೊಡಲಿದೆ ಎಂದರು.
Also read: ವಿನಾಶದ ಅಂಚಿನಲ್ಲಿರುವ ಮುಜಂತಿ ಜೇನು ಸಂರಕ್ಷಣೆಗೆ ರೈತರು ಆಸಕ್ತಿ ವಹಿಸಿ: ಗೌತಮ್ ಬಿಚ್ಚುಗತ್ತಿ

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)










Discussion about this post