ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್’ಗೆ #Actor Darshan ಮತ್ತೊಂದು ಕಂಟಕ ಎದುರಾಗಲಿದೆ ಎಂದು ಹೇಳಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಘಟನೆ ಬೆನ್ನಲ್ಲೇ ಆರ್ ಆರ್ ನಗರದ ಐಡಿಯಲ್ ಹೋಮ್’ನಲ್ಲಿರುವ ದರ್ಶನ್ ಮನೆ ತೂಗದೀಪ ನಿವಾಸಕ್ಕೂ ಸಂಚಕಾರ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
2016ರಲ್ಲಿ ರಾಜ ಕಾಲುವೆ ಒತ್ತುವರಿ ತೆರವಿಗೆ ಸರ್ಕಾರ ಸೂಚಿಸಿತ್ತು. ಒತ್ತುವರಿ ಮಾಡಿಕೊಂಡ ಕಟ್ಟಡಗಳ ಪಟ್ಟಿ ಮಾಡಿ ಬಿಬಿಎಂಪಿ ಬಿಡುಗಡೆ ಮಾಡಿತ್ತು. ರಾಜಕಾಲುವೆಯ ಬಫರ್ ಝೋನ್ ಮೇಲೆ ದರ್ಶನ್ ನಿವಾಸ ನಿರ್ಮಾಣವಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಾಗ ದರ್ಶನ್ ಹೈಕೋರ್ಟ್’ನಿಂದ ತಡೆಯಾಜ್ಞೆ ತಂದಿದ್ದರು.
Also read: ಕಾರವಾರ | NIA ದಾಳಿ | ಉಗ್ರರ ಜೊತೆ ಸಂಪರ್ಕ ಹಿನ್ನೆಲೆ ಶುಕ್ಕೂರ್ ಬಂಧನ | ಶಿವಮೊಗ್ಗಕ್ಕೂ ಇದೆಯಾ ಲಿಂಕ್
ಆರ್ ಆರ್ ನಗರದಲ್ಲಿ ಒಟ್ಟು 70 ಕಡೆ ಒತ್ತುವರಿ ಆಗಿರುವುದು ಪತ್ತೆಯಾಗಿತ್ತು. ಹಳೆಯ 37 ಕಡೆ, ಹೊಸದಾಗಿ 33 ಕಡೆ ಒತ್ತುವರಿಯಾಗಿರುವುದು ಬಿಬಿಎಂಪಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಈ ಪ್ರಕರಣ ಈಗ ಮತ್ತೆ ಮರುಜೀವ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post