ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ವಿದ್ಯುತ್, ನೀರು ಹಾಗೂ ಆಹಾರ ಧಾನ್ಯಗಳ ದರ ಏರಿಕೆಯಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೂ ಸಹ ಕಾಂಗ್ರೆಸ್ ಸರ್ಕಾರ ಬರೆ ಎಳೆದಿದೆ.
ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡುವ ಮೂಲಕ ಶಾಕ್ ನೀಡಿರುವ ರಾಜ್ಯ ಸರ್ಕಾರ, ಈ ಮೂಲಕ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ದೂಡಿದೆ.
ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಖಾಸಗಿ ಶಾಲೆಗಳಲ್ಲಿ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲಾಗಿದೆ ಎಂದಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಮತ್ತು ಕಾಮೆಡ್ ಕೆ ಕೋಟಾದ ಸೀಟುಗಳ ಪ್ರವೇಶ ಶುಲ್ಕವನ್ನು ಈ ವರ್ಷದಿಂದಲೇ ಪೂರ್ವಾನ್ವಯವಾಗುವಂತೆ ಶೇ.10ರಷ್ಟು ಹೆಚ್ಚಿಸಲಾಗಿದೆ.
ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್’ಗಳ ಪ್ರವೇಶಕ್ಕಾಗಿ ಕರ್ನಾಟಕ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಆದರೆ ಇದು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರವಲ್ಲ ಎನ್ನಲಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಇದನ್ನು ನಿರ್ಧರಿಸಿತ್ತು. ಅದನ್ನು ಈಗ ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















