ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವೈದ್ಯಕೀಯ ಜಾಮೀನಿನ ಮೇಲೆ ಆಸ್ಪತ್ರೆಯಲ್ಲಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಎರಡನೇ ಆರೋಪಿ ನಟ ದರ್ಶನ್’ಗೆ #Darshan ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್’ಗೆ ಹೈಕೋರ್ಟ್ ನೀಡಿರುವ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್’ನಲ್ಲಿ ಪ್ರಶ್ನಿಸಲು ರಾಜ್ಯ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ.

Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಕಾರ್ತಿಕ ದೀಪೋತ್ಸವ | ಪಿಟೀಲು ವಾದನ
ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿ.ಎನ್. ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.

ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತçಚಿಕಿತ್ಸೆ ಮಾಡಿಸಿಕೊಂಡಿಲ್ಲ. ಎಲ್ಲಾ ಅಂಶಗಳನ್ನು ಪ್ರಸ್ತಾಪಿಸಿ ಪೊಲೀಸರು ಮೇಲ್ಮನವಿ ಸಲ್ಲಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post