ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವೈದ್ಯಕೀಯ ಜಾಮೀನಿನ ಮೇಲೆ ಆಸ್ಪತ್ರೆಯಲ್ಲಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಎರಡನೇ ಆರೋಪಿ ನಟ ದರ್ಶನ್’ಗೆ #Darshan ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್’ಗೆ ಹೈಕೋರ್ಟ್ ನೀಡಿರುವ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್’ನಲ್ಲಿ ಪ್ರಶ್ನಿಸಲು ರಾಜ್ಯ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಗೃಹ ಸಚಿವಾಲಯದ ಅನುಮತಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್’ನಲ್ಲಿ ಪ್ರಶ್ನಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಕಾರ್ತಿಕ ದೀಪೋತ್ಸವ | ಪಿಟೀಲು ವಾದನ
ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿ.ಎನ್. ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.
ಅನಾರೋಗ್ಯದ ಕಾರಣಕ್ಕಾಗಿ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿತ್ತು.
ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತçಚಿಕಿತ್ಸೆ ಮಾಡಿಸಿಕೊಂಡಿಲ್ಲ. ಎಲ್ಲಾ ಅಂಶಗಳನ್ನು ಪ್ರಸ್ತಾಪಿಸಿ ಪೊಲೀಸರು ಮೇಲ್ಮನವಿ ಸಲ್ಲಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post