ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನಲ್ಲಿ ನಡೆದ 10 ಮೀಟರ್ ಗಳ ಏರ್ ರೈಫಲ್ ಶೂಟಿಂಗ್ ಅಕಾಡೆಮಿಯನ್ನು ಅರ್ಜುನ ಪ್ರಶಸ್ತಿ ಪುರಸ್ಕೃತರೂ ಹಾಗೂ ಒಲಂಪಿಯನ್ ಅಂತರಾಷ್ಟ್ರೀಯ ರೈಫಲ್ ಶೂಟಿಂಗ್ ಕ್ರೀಡಾಪಟು ಪ್ರಕಾಶ್ ನಂಜಪ್ಪ ಉದ್ಘಾಟಿಸಿದರು.
ಶೇಷಾದ್ರಿಪುರಂ ಶಿಕ್ಷಣದತ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅಂತರಾಷ್ಟ್ರೀಯ ಕ್ರಿಡಾಪಟು ಪ್ರಕಾಶ್ ನಂಜಪ್ಪ ಅವರು ಮಾತನಾಡಿದರು.
ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈಗಾಗಲೇ ಕ್ರೀಡಾ ವಿಭಾಗದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ್ದಾರೆ. ಇಲ್ಲಿ ಇಂದು ಸ್ಥಾಪಿಸಲಾಗಿರುವ 10 ಮೀಟರ್ ಗಳ ಏರ್ ರೈಫಲ್ ಶೂಟಿಂಗ್ ಅಕಾಡೆಮಿಯು ಇದೇ ಮೊದಲು ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವುದು. ಬೇರೆ ಎಲ್ಲೂ ಇಲ್ಲ ಹಾಗಾಗಿ ಶೇಷಾದ್ರಿಪುರಂ ಶಿಕ್ಷಣದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ವೂಡೇ ಪಿ ಕೃಷ್ಣ ಅವರಿಗೆ ಧರ್ಮದರ್ಶಿಗಳಾದ ಡಬ್ಲ್ಯು.ಡಿ ಅಶೋಕ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಹಾಗೂ ಪ್ರಾಂಶುಪಾಲರಾದ ಪ್ರೊ.ಎನ್.ಎಸ್. ಸತೀಶ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಕ್ಯಾಪ್ಟನ್ ಚಿಕ್ಕರಂಗಸ್ವಾಮಿ ಅವರಿಗೆ ನನ್ನ ಶುಭಾಷಯಗಳನ್ನು ಸಲ್ಲಿಸುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಮುನ್ನಡೆಸುವವರ ಕಾಳಜಿ ಮತ್ತು ದೂರ ದೃಷ್ಟಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ. ನಿಸ್ವಾರ್ಥದಿಂದ ಮಾಡುವ ಇಂತಹ ಐತಿಹಾಸಿಕ ಕೆಲಸಗಳು ದೇಶಸೇವೆಯೇ ಆಗಿವೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರಿಕೇಟ್ ಅಸೋಸಿಯೆಷನ್ ನ ಗೌರವ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಅಧ್ಯಕ್ಷ ಎನ್.ಆರ್. ಪಂಡಿತಾರಾಧ್ಯ, ಗೌರವ ಪ್ರಧಾನ ಕಾರ್ಯದರ್ಶಿಗಳಾದ ಶಿಕ್ಷಣ ತಜ್ಞ ನಾಡೋಜ.ಡಾ ವೂಡೇ ಪಿ ಕೃಷ್ಣ, ಹಾಗೂ ಧರ್ಮದರ್ಶಿಗಳಾದ ಡಬ್ಲ್ಯು ಡಿ. ಅಶೋಕ್, ಪ್ರಾಂಶುಪಾಲರಾದ ಪ್ರೊ.ಎನ್.ಎಸ್. ಸತೀಶ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಕ್ಯಾಪ್ಟನ್ ಚಿಕ್ಕರಂಗಸ್ವಾಮಿ ಮೊದಲಾದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post