ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು ನಾಲ್ಕು ತಿಂಗಳು ಕಳೆದಿದ್ದು, ಲೋಕಸಭಾ ಚುನಾವಣೆಯೂ ಸಹ ಸನಿಹವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ ಮತ್ತೆ ಚರ್ಚೆಗೆ ಬಂದಿದೆ.
ಚುನಾವಣಾ ಫಲಿತಾಂಶ ಘೋಷಣೆಯಾದಾಗಿನಿಂದಲೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಅಲ್ಲಿಂದಲೇ ತಣ್ಣಗಾಗಿದ್ದ ವಿಚಾರ ಈಗ ಮತ್ತೆ ಮುನ್ನಲೆಗೆ ಬಂದಿದೆ.
ಈ ಕುರಿತಂತೆ ಪಕ್ಷದ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಅಂದುಕೊಂಡಂತೆ ಆದರೆ ಈ ವಾರವೇ ಹೊಸ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಪುದುಚೇರಿ, ನಾಗಾಲ್ಯಾಂಡ್, ಮೇಘಾಲಯ ರಾಜ್ಯ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಬಿಜೆಪಿ ವರಿಷ್ಠರು ಈಗಾಗಲೇ ಮಾಡಿರುವುದು ಈ ಮಾಹಿತಿಗೆ ಪುಷ್ಠಿ ನೀಡಿದೆ.
Also read: ರಾಜ್ಯಕ್ಕೆ ಮ ತ್ತೆ ಬರೆ: ತಮಿಳುನಾಡಿಗೆ 18 ದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ
ಬಿ.ವೈ. ವಿಜಯೇಂದ್ರಗೆ ಪಟ್ಟ?
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ BSYadiyurappa ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ BYVijayendra ಅವರಿಗೆ ಪಟ್ಟ ಕಟ್ಟಲಾಗುತ್ತದೆ ಎಂದು ಹೇಳಲಾಗಿದೆ.
ಕಳೆದ ವಿಧಾನಸಭಾ ಚುನಾವಣೆ ಹಾಗೂ ಹಿಂದಿನ ಉಪಚುನಾವಣೆಗಳಲ್ಲಿ ಸಕ್ರಿಯವಾಗಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿದ್ದ ವಿಜಯೇಂದ್ರ ಸದ್ಯ ಈಗಲೂ ಸಹ ಪಕ್ಷದ ಚಟುವಟಿಕೆಗಳಲ್ಲಿ ತುಸು ಹೆಚ್ಚಾಗಿಯೇ ಸಕ್ರಿಯರಾಗಿದ್ದಾರೆ. ಯಡಿಯೂರಪ್ಪ ಅವರೂ ಸಹ ಪಕ್ಷದ ಕಾರ್ಯಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುವುದು ಇದಕ್ಕೆ ಪೂರಕವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post