ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ Minister Ashwathnarayan ತಿಳಿಸಿದ್ದಾರೆ.
ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಕೆ. ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸರಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post