ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ Sonia Gandhi, Rahul Gandhi ಏನು ದೇವರ ಮಕ್ಕಳಾ? ಅವರನ್ನು ಯಾರೂ ಪ್ರಶ್ನೆ ಮಾಡಬಾರದಾ ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಎಂ.ಪಿ. ರೇಣುಕಾಚಾರ್ಯ MLA MP Renukacharya ಕಟುವಾಗಿ ಪ್ರಶ್ನಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿಚಾರದಲ್ಲಿ ರಮೇಶ್ ಕುಮಾರ್ ಅವರು ಸತ್ಯವನ್ನೇ ಹೇಳಿದ್ದಾರೆ. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮಾತನಾಡಿ, ಸಿಬಿಐ ಅನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿರುವುದನ್ನು ಟೀಕಿಸಿದ್ದರು ಎಂದರು.

Also read: ತಾಕತ್ತಿದ್ದರೆ ನಮ್ಮ ಸರ್ಕಾರದಲ್ಲಿ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ತೋರಿಸಲಿ: ಕಾಂಗ್ರೆಸ್’ಗೆ ಈಶ್ವರಪ್ಪ ಸವಾಲ್
ಕೂಸು ಹುಟ್ಟುವ ಮುನ್ನೇ ಸಿಎಂ ಗಾದಿಗೆ ಪೈಪೋಟಿ ಮಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಕಿಡಿ ಕಾರಿದ ಅವರು, ಡಿಕೆಶಿ ಜಾತಿ ಆಧಾರದಲ್ಲಿ ಮತ ಬೆಂಬಲ ಕೇಳುತ್ತಿದ್ದಾರೆ, ನಾಚಿಕೆ ಆಗುವುದಿಲ್ಲವಾ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂದರು.










Discussion about this post