ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜಧಾನಿಯಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಐವರು ಆರೋಪಿಗಳನ್ನು ಉಗ್ರರು ಎಂದು ಈಗಲೇ ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ GParameshwar ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಗೆ ಭಯೋತ್ಪಾದನೆಯ ಸಂಪರ್ಕ ಇದೆಯಾ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇವರಿಗೆ ಕೇಂದ್ರ ಕಾರಾಗೃಹದಲ್ಲಿ ಇರುವವರೊಂದಿಗೆ ಸಂಪರ್ಕವಿದೆ ಎಂದು ತಿಳಿದುಬಂದಿದೆ ಎಂದಿದ್ದಾರೆ.

Also read: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ: ಸರ್ಕಾರದ ವಿರುದ್ಧ ಎಚ್’ಡಿಕೆ ಕಿಡಿ
ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.











Discussion about this post